ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುವ ಸಲುವಾಗಿ ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ನಗರಕ್ಕೆ ಆಗಮಿಸಿದ್ದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್'ಸಿ, ಎಸ್'ಟಿ ಕಾಯ್ದೆ ಕುರಿತಂತೆ ಕೋವಿಂದ್ ಅವರಿಗೆ ವಿವರಣೆ ನೀಡಿದ್ದರು. ಸಾಮಾಜಿಕ ವಲಯದಲ್ಲಿನ ಕಾರ್ಯಕ್ರಮಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸರ್ಕಾರ ನೀಡುತ್ತಿರುವ ಅನುದಾನ, ಅನುದಾನ ದುರ್ಬಳಕೆ ಮಾಡಿಕೊಳ್ಳುವವರ ವಿರುದ್ಧದ ಕ್ರಮ ಸೇರಿದಂತೆ ಇನ್ನಿತರೆ ಯೋಜನೆಗಳ ಕುರಿತಂತೆ ವಿವರಣೆಯನ್ನು ನೀಡಿದ್ದಾರೆ.