ಅಂತೆಯೇ ಈ ಹಿಂದೆ ಆತ್ಮಹತ್ಯೆ ಮಾಡಿಕೊಂಡ ಧನ್ಯಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಾಲಕೃಷ್ಣ ಪೂಜಾರಿ ಮತ್ತು ಸತೀಶ್ ಎಂಬುವವರನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರನ್ನೂ ಶುಕ್ರವಾರ ಬಂಟ್ವಾಳ ತಾಲೂಕಿನಲ್ಲಿ ಬಂಧಿಸಲಾಗಿತ್ತು, ಇಬ್ಬರ ವಿರುದ್ಧವೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದಲ್ಲದೆ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 153 ಎ, 354, 504ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.