ಕಸದ ಟ್ರ್ಯಾಕ್ಟರ್'ನಲ್ಲಿ ಪತ್ರಕರ್ತನ ಶವ ಸಾಗಣೆ: ತನಿಖೆಗೆ ಆದೇಶಿಸಿದ ಸಿಎಂ ಸಿದ್ದರಾಮಯ್ಯ

ರಸ್ತೆ ಅಪಘಾತದಲ್ಲಿ ಮೃತಪಟ್ಟ ಖಾಸಗಿ ಸುದ್ದಿ ವಾಹಿನಿಯ ವರದಿಗಾರ ಮೌನೇಶ್ ಪೋತರಾಜ ಅವರ ಮೃತದೇಹವನ್ನು ಕಸದ ಸಾಗಿಸುವ ಟ್ರ್ಯಾಕ್ಟರ್"ನಲ್ಲಿ ಆಸ್ಪತ್ರೆಗೆ ಸಾಗಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಕರಣವನ್ನು ತನಿಖೆಗೆ ಆದೇಶಿಸಿದ್ದಾರೆ...
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Updated on: 
ಬೆಂಗಳೂರು: ರಸ್ತೆ ಅಪಘಾತದಲ್ಲಿ ಮೃತಪಟ್ಟ ಖಾಸಗಿ ಸುದ್ದಿ ವಾಹಿನಿಯ ವರದಿಗಾರ ಮೌನೇಶ್ ಪೋತರಾಜ ಅವರ ಮೃತದೇಹವನ್ನು ಕಸದ ಸಾಗಿಸುವ ಟ್ರ್ಯಾಕ್ಟರ್"ನಲ್ಲಿ ಆಸ್ಪತ್ರೆಗೆ ಸಾಗಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಕರಣವನ್ನು ತನಿಖೆಗೆ ಆದೇಶಿಸಿದ್ದಾರೆ. 
ಕಾರವಾರ ಜಿಲ್ಲೆಯ ಸಿರ್ಸಿಯಲ್ಲಿ ಖಾಸಗಿ ಸುದ್ದಿ ವಾಹಿನಿಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದ 28 ವರ್ಷದ ಮೌನೇಶ್ ಪೋತರಾಜ್, ನಿನ್ನೆ ಸಂಕ್ರಾಂತಿ ಹಬ್ಬಕ್ಕೆಂದು ತಮ್ಮ ಕುಟುಂಬದ ಸದಸ್ಯರಿಗೆ ಉಡುಗೊರೆ ಖರೀದಿಸಿ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿ ಮೌನೇಶ್ ಮೃತಪಟ್ಟಿದ್ದರು. ವಿಷಯ ತಿಳಿದ ಹಾನಗಲ್ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಹಾನಗಲ್ ಪುರಸಭೆಗೆ ಸೇರಿದ ಕಸದ ವಾಹನದಲ್ಲಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಪೊಲೀಸರ ಈ ವರ್ತನೆಗೆ ಸಾಕಷ್ಟು ವಿರೋಧಗಳು ವ್ಯಕ್ತವಾಗತೊಡಗಿದ್ದವು. 
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತನಿಖೆಗೆ ಆದೇಶಿಸಿದ್ದು, ಹಾನಗಲ್ ಎಸ್ಐಯನ್ನು ವರ್ಗಾವಣೆ ಮಾಡಿದ್ದಾರೆ. 
ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ಸುದ್ದಿ ತಿಳಿದು ಬಹಳ ನೋವಾಯಿತು. ಸಂಚಾರಿ ಮತ್ತು ರಸ್ತೆ ಸುರಕ್ಷತೆ ಎಡಿಜಿಪಿಯಿಂದ ವರದಿಯನ್ನು ಕೇಳಲಾಗಿತ್ತು. ಕೂಡಲೇ ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. 
ಈ ನಡುವೆ ನಟ ಪ್ರಕಾಶ್ ರಾಯ್ ಅವರು ಪತ್ರಕರ್ತ ಮೌನೇಶ್ ಅವರ ಕುಟುಂಬ ಸದಸ್ಯರಿಗೆ ರೂ.1 ಲಕ್ಷ ಪರಿಹಾರ ಧನವನ್ನು ನೀಡಿದ್ದಾರೆ. ಅಲ್ಲದೆ, ಹಲವು ಪತ್ರಕರ್ತರೂ ಕೂಡ ಮೌನೇಶ್ ಅವರ ಕುಟುಂಬಕ್ಕೆ ನೆರವಗಲು ಮುಂದಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com