ಕಾಶಿನಾಥ್ ನಿಧನ: ಸಿಎಂ ಸಿದ್ದರಾಮಯ್ಯ, ದೇವೇಗೌಡ ಸಂತಾಪ

ಹಿರಿಯ ನಟ ಹಾಗೂ ನಿರ್ದೇಶಕ ಕಾಶಿನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ. ದೇವೇಗೌಡ ಅವರು ಶುಕ್ರವಾರ ಸಂತಾಪ ಸೂಚಿಸಿದ್ದಾರೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ. ದೇವೇಗೌಡ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ. ದೇವೇಗೌಡ
Updated on
ಮೈಸೂರು: ಹಿರಿಯ ನಟ ಹಾಗೂ ನಿರ್ದೇಶಕ ಕಾಶಿನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ. ದೇವೇಗೌಡ ಅವರು ಶುಕ್ರವಾರ ಸಂತಾಪ ಸೂಚಿಸಿದ್ದಾರೆ. 
ಕಾಶಿನಾಥ್ ವಿಧಿವಶರಾಗಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾಶಿನಾಥ್ ಅವರು ಪ್ರತಿಭಾವಂತ ಕಲಾವಿದರು. ವಿಶೇಷವಾಗಿ ಹಾಸ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಕಾಶಿನಾಥ್ ಅವರು ಅಭಿನಯಿಸಿರುವ ಎರಡು ಚಿತ್ರಗಳನ್ನು ನಾನು ನೋಡಿದ್ದೇನೆ. ಕಾಶಿನಾಥ್ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ನಿಧನದ ನೋವು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ನೀಡಲೆಂದು ಆಶಿಸುತ್ತೇನೆಂದು ಹೇಳಿದ್ದಾರೆ. 
ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ. ದೇವೇಗೌಡ ಅವರು ಮಾತನಾಡಿ, ಕಾಶಿನಾಥ್ ಅವರು ಕನ್ನಡ ಚಿತ್ರರಂಗಕ್ಕೆ ಉತ್ತಮ ಚಿತ್ರಗಳನ್ನು ನೀಡಿದ್ದರು. ಅವರ ಅಮೋಘ ನಟನೆಯಿಂದ ಕನ್ನಡ ಚಿತ್ರರಂಗವನ್ನು ರಂಜಿಸಿದ್ದರು. ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗ ಇಂದು ಬರಿದಾಗಿದೆ. ದೇವರು ಕಾಶಿನಾಥ್ ಅವರ ಆತ್ಮಕ್ಕೆ ಶಾಂತಿ ನೀಡಲಿ. ಭಗವಂತ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ತಿಳಿಸಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com