ಅಕ್ರಮ ಗಣಿ ಪ್ರಕರಣ: ಸಿಬಿಐ ಮುಗಿಸಿದ್ದ ಪ್ರಕರಣದ ಮರುತನಿಖೆ ಎಸ್ಐಟಿಗೆ

ಬಿಜೆಪಿ ಅಧಿಕಾರಾವಧಿಯಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ಪ್ರಕರಣಗಳಿಗೆ ಮರುಜೀವ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇದರಂತೆ, ಪ್ರಕರಣಗಳ ಮರು ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಮಾಡಲು ತೀರ್ಮಾನ ಕೈಗೊಂಡಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಬೆಂಗಳೂರು: ಬಿಜೆಪಿ ಅಧಿಕಾರಾವಧಿಯಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ಪ್ರಕರಣಗಳಿಗೆ ಮರುಜೀವ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇದರಂತೆ, ಪ್ರಕರಣಗಳ ಮರು ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಮಾಡಲು ತೀರ್ಮಾನ ಕೈಗೊಂಡಿದೆ. 
ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸಿದ್ದ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಅಕ್ರಮ ನಡೆದಿರುವ ಬಗ್ಗೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು 20 ಪ್ರಕರಣಗಳನ್ನು ಇತ್ಯರ್ಥ ಮಾಡಿತ್ತು. 
ಈ ಬಗ್ಗೆ ಸಚಿವ ಹೆಚ್.ಕೆ. ಪಾಟೀಲ್ ನೇತೃತ್ವದ ಸಂಪುಟ ಉಪ ಸಮಿತಿ ಸಿಬಿಐ ನೀಡಿದ ತನಿಖಾ ವರದಿ ಪರಿಶೀಲಿಸಿ ಎಸ್ಐಟಿಯಿಂದ ತನಿಖೆ ಸೂಕ್ತ ಎಂದು ಶಿಫಾರಸು ಮಾಡಿತ್ತು. ಈ ಶಿಫಾರಸ್ಸಿಗೆ ನಿನ್ನೆ ನಡೆದ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಪ್ರಕರಣಗಳನ್ನು ಮರು ತನಿಖೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. 
ಸಭೆಯಲ್ಲಿ ತೆಗೆದುಕೊಂಡು ತೀರ್ಮಾನಗಳ ಕುರಿತಂತೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಾನೂನು ಸಚಿವ ಟಿ.ಬಿ. ಜಯಚಂದ್ರ ಅವರು, ಕಾರವಾರದ ಬೇಲೆಕೇರಿ ಬಂದರು ಹಾಗೂ ಗೋವಾದ ಪಣಜಿ ಮತ್ತು ಮರ್ಮಗೋವಾ ಬಂದರಿನಿಂದ ರಾಜ್ಯದ ಕಬ್ಬಿಣದ ಅದಿರನ್ನು ಅಕ್ರಮವಾಗಿ ಸಾಗಾಟ ಮಾಡಿರುವ ಬಗ್ಗೆ ತನಿಖೆ ಮಾಡಿದ್ದ ಸಿಬಿಐ, ವರದಿಯಲ್ಲಿ ಅಕ್ರಮ ನಡೆದಿರುವುದರ ಬಗ್ಗೆ ಯಾವುದೇ ಸಾಕ್ಶ್ಯಾಧಾರಗಳಿಲ್ಲ ಎಂದು ಹೇಳಿ ಪ್ರಕರಣವನ್ನು ಇತ್ಯರ್ಥ ಮಾಡಿತ್ತು. ಆದರೆ, ಆಗಿನ ಲೋಕಾಯುಕ್ತರು ನೀಡಿದ್ದ ವರದಿಯಲ್ಲಿ ಸಾಕಷ್ಟು ದಾಖಲೆಗಳ ಆಧಾರದ ಮೇಲೆ ಅಕ್ರಮ ನಡೆದಿದೆ ಎಂದು ತಿಳಿಸಿದ್ದರು. ಹೀಗಿರುವಾಗ ಸಿಬಿಐ ಸಾಕ್ಷ್ಯಾಧಾರಗಳಿಲ್ಲ ಎಂದು ಹೇಳಿರುವುದು ಸೋಜಿಗವಾಗಿದೆ. ಹೀಗಾಗಿ ಪ್ರಕರಣವನ್ನು ಮತ್ತೆ ಮರುತನಿಖೆ ನಡೆಸಲು ತೀರ್ಮಾನಿಸಲಾಗಿದ್ದು, ಎಸ್ಐಟಿ ಹೊಸದಾಗಿ ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ವಿವರಿಸಿದ್ದಾರೆ. 
ಇದೇ ವಳೆ ಅಕ್ರಮ ಗಣಿಗಾರಿಕೆ ನಡೆಸಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ನಷ್ಟು ಉಂಟು ಮಾಡಿರುವ ಗಣಿ ಗುತ್ತಿಗೆದಾರರು, ಸಾಗಾಣೆದಾರರು, ವ್ಯಾಪಾರಿಗಳು, ರಫ್ತುದಾರರ ಚರ ಮತ್ತು ಸ್ಥಿರಾಸ್ತಿಗಳನ್ನು ಜಪ್ತಿ ಮಾಡಲು ಕಾನೂನಿನ ಬಲ ನೀಡುವ ನಿಯಮ ಸೇರ್ಪಡೆಗೆ ಸಂಪುಟ ತೀರ್ಮನ ಕೈಗೊಂಡಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com