ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಪಂಚಭೂತಗಳಲ್ಲಿ ಲೀನ

ಹೃದಯಾಘಾತದಿಂದ ನಿಧನರಾಗಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ದೇಶಕ ಕಾಶಿನಾಥ್ ಅವರು ಗುರುವಾರ ಪಂಚಭೂತಗಳಲ್ಲಿ ಲೀನವಾಗಿದ್ದಾರೆ.
ಕಾಶಿನಾಥ್ ಅಂತ್ಯಸಂಸ್ಕಾರ
ಕಾಶಿನಾಥ್ ಅಂತ್ಯಸಂಸ್ಕಾರ
ಬೆಂಗಳೂರು: ಹೃದಯಾಘಾತದಿಂದ ನಿಧನರಾಗಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ದೇಶಕ ಕಾಶಿನಾಥ್ ಅವರು ಗುರುವಾರ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. 
ಇಂದು ಸಂಜೆ ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಯಿತು, ಕಾಶಿನಾಥ್ ಅವರ ಪುತ್ರ ಅಭಿಮನ್ಯು ಅವರು ಸಂಪ್ರದಾಯದಂತೆ ಅಂತಿಮ ವಿಧಿ, ವಿಧಾನ ನೆರವೇರಿಸಿದ ಬಳಿಕ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.
ಅಂತ್ಯಸಂಸ್ಕಾರದಲ್ಲಿ ಕಾಶಿನಾಥ್ ಅವರ ಕುಟುಂಬ ಹಾಗೂ ಸ್ಯಾಂಡಲ್ ವುಡ್ ನ ಹಲವು ನಟರು ಸೇರಿದಂತೆ ಸಾವಿರಾರು ಗಣ್ಯರು ಭಾಗವಹಿಸಿದ್ದರು.
ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ 67 ವರ್ಷದ ಕಾಶಿನಾಥ್ ಅವರು ಇಂದು ಬೆಳಗ್ಗೆ ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು.ಕಾಶಿನಾಥ್ ಅವರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ತಮ್ಮ ಅಮೋಘ ಅನುಭವದ ಮೂಲಕ ಕನ್ನಡ ಚಿತ್ರರಸಿಕರಿಗೆ ಕಾಶಿನಾಥ್ ಅವರು ಹತ್ತಿರವಾಗಿದ್ದರು. ಕನ್ನಡ ಚಿತ್ರರಂಗದ ಪ್ರತಿಭಾನ್ವಿಟ ನಟ ಹಾಗೂ ನಿರ್ದೇಶಕರಾಗಿರುವ ಕಾಶಿನಾಥ್ ಅವರು, ಕುಂದಾಪುರ ಸಮೀಪದ ಕೋಟೇಶ್ವರದ ಮಧ್ಯಮ ವರ್ಗದ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ್ದರು. 
ಉಪೇಂದ್ರ, ಮನೋಹರ್, ಸುನಿಲ್ ಕುಮಾರ್ ದೇಸಾಯಿ ಮುಂತಾದ ಹೆಸರಾಂತ ನಿರ್ದೇಶಕರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ್ದ ಕಾಶಿನಾಥ್ ಅವರು ತಮ್ಮ ನಟನೆ, ನಿರ್ದೇಶನ, ಸಂಗೀತ ನಿರ್ದೇಶನ ಹಾಗೂ ಚಿತ್ರ ನಿರ್ಮಾಣದಲ್ಲಿ ಕೈಚಳಕ ತೋರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.
ಅನಂತನ ಅವಾಂತರ, ಅನುಭವ, ಹೆಂಡತಿ ಎಂದರೆ ಹೇಗಿರಬೇಕು ಇತ್ಯಾದಿ ಚಿತ್ರಗಳು ಕಾಶಿನಾಥ್ ಅವರ ಪ್ರಮುಖ ಚಿತ್ರಗಳಾಗಿದ್ದು, ಮಂಗಳೂರು ಮಂಜುನಾಥ ಚಿತ್ರದ ಸಂಭಾಷಣೆಗಳು ಬಹಳ ಜನಪ್ರಿಯತೆಯನ್ನು ಗಳಿಸಿತ್ತು.11 ಕನ್ನಡ, 1 ಹಿಂದಿ ಹಾಗೂ 1 ತೆಲುಗು ಚಿತ್ರ ನಿರ್ಮಾಣ ಮಾಡಿದ್ದರು. 80ರ ದಶಕದ ಸ್ಯಾಂಡಲ್‍ವುಡ್‍ನ ಜನಪ್ರಿಯ ನಟ ಹಾಗೂ ನಿರ್ದೇಶಕರಾಗಿದ್ದರು. ಇತ್ತೀಚಿನ ಚೌಕ ಸಿನಿಮಾ ಕಾಶಿನಾಥ್ ಅವರ ಕೊನೆಯ ಸಿನಿಮಾ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com