ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆಗೆ ಮುಂದಾದರೆ ಗುಂಡಿಕ್ಕಿ: ನಗರ ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್

ಕರ್ತವ್ಯ ನಿರತ ಪೊಲೀಸರ ಮೇಲಿನ ಹಲ್ಲೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ನೂತನ ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ ಸುನೀಲ್ ಕುಮಾರ್...
ಟಿ ಸುನೀಲ್ ಕುಮಾರ್
ಟಿ ಸುನೀಲ್ ಕುಮಾರ್
Updated on
ಬೆಂಗಳೂರು: ಕರ್ತವ್ಯ ನಿರತ ಪೊಲೀಸರ ಮೇಲಿನ ಹಲ್ಲೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ ಸುನೀಲ್ ಕುಮಾರ್ ಅವರು ಹಲ್ಲೆಗೆ ಮುಂದಾದ ಹಲ್ಲೆಕೋರರ ಮೇಲೆ ಗುಂಡಿಕ್ಕಿ ಎಂದು ತಮ್ಮ ಸಿಬ್ಬಂದಿಗೆ ಖಡಕ್ ಆದೇಶ ನೀಡಿದ್ದಾರೆ. 
ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ನಿನ್ನೆ ಸುನೀಲ್ ಕುಮಾರ್ ಅವರು ಹಲ್ಲೆಕೋರರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ  ಆದೇಶಿಸಿದ್ದರು. ಆದರೆ ಇಂದು ತಮ್ಮ ಸಿಬ್ಬಂದಿಗಳಿಗೆ ಇನ್ನು ಮುಂದೆ ತಮ್ಮ ಮೇಲೆ ಹಲ್ಲೆಗೆ ಮುಂದಾದರೆ ಅಂತಹವರಿಗೆ ಗುಂಡಿಕ್ಕಿ ಎಂದು ಹೇಳಿದ್ದಾರೆ. 
ಸುದ್ದಿಗಾರರೊಂದಿಗೆ ಮಾತನಾಡಿದ ಸುನೀಲ್ ಕುಮಾರ್ ಅವರು, ಕರ್ತವ್ಯ ನಿರತ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಹಲ್ಲೆಕೋರರ ಮೇಲೆ ಗುಂಡಿನ ದಾಳಿ ನಡೆಸಬಹುದು. ಇದನ್ನು ಬಿಟ್ಟು ನಮಗೆ ಬೇರೆ ಆಯ್ಕೆಗಳಿಲ್ಲ. ಈವರೆಗೆ ಪೊಲೀಸರ ಮೇಲೆ ನಡೆದಿರುವ ಹಲ್ಲೆಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು. 
ಸದ್ಯ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳು ರೌಡಿ ಶೀಟರ್ ಅಥವಾ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿಲ್ಲ. ನಾವು ಈಗಾಗಲೇ ಹಲವು ಆರೋಪಿಗಳನ್ನು ಬಂಧಿಸಿದ್ದು ಅವರೆಲ್ಲಾ ನ್ಯಾಯಾಂಗದ ಬಂಧನದಲ್ಲಿದ್ದಾರೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com