ರಕ್ತದಲ್ಲಿ ಬರೆದ ಪತ್ರ
ರಾಜ್ಯ
ಗೋಹತ್ಯೆ ನಿಷೇಧಕ್ಕೆ ಆಗ್ರಹಿಸಿ ಪ್ರಧಾನಿ, ಸಿಎಂಗೆ ರಕ್ತದಲ್ಲಿ ಪತ್ರ ಬರೆದ ಐವರು ಸ್ವಾಮೀಜಿಗಳು
ಗೋಹತ್ಯೆ ನಿಷೇಧಿಸುವಂತೆ ಹಾಗೂ ದೇಸಿ ತಳಿಯ ಗೋವುಗಳನ್ನು ರಕ್ಷಿಸುವಂತೆ ಒತ್ತಾಯಿಸಿ ಮೈಸೂರು ಜಿಲ್ಲೆಯ ಐವರು ಸ್ವಾಮೀಜಿಗಳು....
ಮೈಸೂರು: ಗೋಹತ್ಯೆ ನಿಷೇಧಿಸುವಂತೆ ಹಾಗೂ ದೇಸಿ ತಳಿಯ ಗೋವುಗಳನ್ನು ರಕ್ಷಿಸುವಂತೆ ಒತ್ತಾಯಿಸಿ ಮೈಸೂರು ಜಿಲ್ಲೆಯ ಐವರು ಸ್ವಾಮೀಜಿಗಳು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶನಿವಾರ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಇಂದು ಮೈಸೂರಿನ ಅಗ್ರಹಾರದ ಹೊಸಮಠದಲ್ಲಿ ಭಾರತೀಯ ಗೋ ಪರಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಐವರು ಸ್ವಾಮೀಜಿಗಳು ರಾಜ್ಯ ಮತ್ತು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಗೋ ಹತ್ಯೆ ನಿಷೇಧಕ್ಕೆ ಆಗ್ರಹಿಸಿ ಹೊಸಮಠದ ಚಿದಾನಂದ ಸ್ವಾಮೀಜಿ, ಮೇಲುಕೋಟೆಯ ಇಳೈ ಆಳ್ವಾರ್ ಸ್ವಾಮೀಜಿ, ನೀಲಕಂಠ ಮಠದ ಸಿದ್ದಮಲ್ಲ ಸ್ವಾಮೀಜಿ, ಸವಿತಾ ಸಮಾಜದ ಶ್ರೀಕರ ಬಸವಾನಂದ ಸ್ವಾಮೀಜಿ, ತ್ರಿಪುರ ಭೈರವಿ ಮಠದ ಕೃಷ್ಣ ಮೋಹನಾನಂದ ಗಿರಿ ಗೋಸ್ವಾಮಿ ಅವರು ರಕ್ತದಲ್ಲಿ ಪತ್ರ ಬರೆದಿದ್ದಾರೆ.


