ಬೆಂಗಳೂರು: ತುಮಕೂರು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗೆ 'ಭಾರತ ರತ್ನ' ನೀಡಬೇಕು ಎಂದು ಕೋರಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.
ಶ್ರೀಗಳು ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಿದ್ದಾರೆ. 8 ದಶಕಗಳಿಂದ ಸಮಾಜ ಸೇವೆಯಲ್ಲಿ ತೊಡಗಿರುವ ಸ್ವಾಮೀಜಿ ಮೂಢನಂಬಿಕೆ ಮತ್ತು ತಾರತಮ್ಯ ತೊಲಗಿಸಿ ಸಮಾಜದಲ್ಲಿ ಸಮಾನತೆ ತರಲು ಶ್ರಮಿಸುತ್ತಿದ್ದಾರೆ. ಮತಭೇದವಿಲ್ಲದೆ ಎಲ್ಲರನ್ನೂ ಸಮಾನವಾಗಿ ಕಾಣುವ ಇವರು ನಡೆದಾಡುವ ದೇವರು ಎಂದು ಜನಪ್ರಿಯರಾಗಿದ್ದಾರೆ.
ಈ ಹಿಂದೆಯೂ ಸಾಕಷ್ಟು ಭಾರಿ ಶ್ರೀಗಳಿಗೆ ಭಾರತ ರತ್ನ ನೀಡಬೇಕೆಂದು ಮನವಿ ಮಾಡಲಾಗಿದೆ. ತ್ರಿವಿಧ ದಾಸೋಹಿ, ಕಾಯಕಯೋಗಿ ಎನಿಸಿದ ಇವರಿಗೆ ಕೇಂದ್ರ ಸರ್ಕಾರ ದೇಶದ ಅತ್ಯುನ್ನತ ಪುರಸ್ಕಾರ ನಿಡಿ ಗೌರವಿಸಬೇಕು ಎಂದು ಕೃಷ್ಣ ತಮ್ಮ ಪತ್ರದಲ್ಲಿ ಹೇಳಿದ್ದಾರೆ.