111 ವರ್ಷ ವಯೋಮಾನದ ಶಿವಕುಮಾರ ಸ್ವಾಮೀಜಿಗಳು ಕಳೆದ 8 ದಶಕಗಳಿಗೂ ಅಧಿಕ ಕಾಲದಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸಾಮಾಜಿಕ ಸಮಾನತೆಗಾಗಿ ಶ್ರಮಿಸುತ್ತಿರುವ ಸ್ವಾಮೀಜಿ ಮಾನವತಾವಾದಿಯಾಗಿದ್ದಾರೆ. ಕನ್ನಡ, ಇಂಗ್ಲಿಷ್ ಮತ್ತು ಸಂಸ್ಕೃತ ಸಾಹಿತ್ಯದ ಜ್ಞಾನವನ್ನು ಹೊಂದಿದ್ದಾರೆ. ಸಮಾದದಲ್ಲಿನ ಕೆಟ್ಟ ಆಚರಣೆ, ಮೂಢನಂಬಿಕೆ ಮತ್ತು ತಾರತಮ್ಯವನ್ನು ಹೊಡೆದೋಡಿಸಲು ಶ್ರಮಿಸುತ್ತಿದ್ದು, ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದಾರೆ.