ಶನಿವಾರ ಮುಂಜಾನೆಯಿಂದ ಭಾನುವಾರ ಬೆಳಿಗ್ಗೆವರೆಗೆ ಸಿಲಿಕಾನ್ ಸಿಟಿಯಲ್ಲಿ ಕನಿಷ್ಠ 7.7 ಹಾಗೂ ಗ್ರಾಮಾಂತರದಲ್ಲಿ 8.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದ್ದು, 1884ರ ಜನವರಿ 13ರಂದು ಬೆಂಗಳೂರಿನಲ್ಲಿ 7.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ಇತ್ತು. ಉಳಿದಂತೆ ಹಾವೇರಿ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತ್ಯಂತ ಕನಿಷ್ಠ ತಾಪಮಾನ 7.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಭಾನುವಾರ 17 ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಒಂದಂಕಿಗೆ ಇಳಿದಿತ್ತು.