ವಿಧಾನಸಭೆ ಚುನಾವಣೆ ಬೆನ್ನಲ್ಲೇ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಭಾರೀ ಸಿದ್ಧತೆ

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಒಂದು ವಾರ ಬಾಕಿಯಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2018-19ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲು ನಿರ್ಧರಿಸಿದ್ದು, ಬಜೆಟ್ ಮಂಡನೆಗೆ ಭಾರೀ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ...
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Updated on
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಒಂದು ವಾರ ಬಾಕಿಯಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2018-19ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲು ನಿರ್ಧರಿಸಿದ್ದು, ಬಜೆಟ್ ಮಂಡನೆಗೆ ಭಾರೀ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ. 
ಚುನಾವಣಾ ವರ್ಷದಲ್ಲಿ ಬಜೆಟ್ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಜನಪ್ರಿಯತೆಯನ್ನು ಉತ್ತುಂಗಕ್ಕೆ ಕೊಂಡೊಯ್ಯುವ ಒತ್ತಡದಲ್ಲಿದ್ದಾರೆ. 
ಚುನಾವಣೆಗೆ ಒಂದು ವಾರ ಇರುವಾಗಲೇ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡುವ ಹಿನ್ನಲೆಯಲ್ಲಿ ವಿರೋಧ ಪಕ್ಷಗಳು ತೀವ್ರವಾಗಿ ಕಿಡಿಕಾರುತ್ತಿವೆ. 
ಚುನಾವಣೆಗೆ ಕೆಲವೇ ದಿನಗಳು ಇರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಲು ನಿರ್ಧರಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಪಾವಿತ್ರ್ಯತೆಯನ್ನು ಹಾಳು ಮಾಡುತ್ತದೆ ಎಂದು ಹೇಳುತ್ತಿವೆ. 
ರಾಜಕೀಯ ತಜ್ಞರು ಪ್ರತಿಕ್ರಿಯೆ ನೀಡಿ, ಚುನಾವಣಾ ವರ್ಷದಲ್ಲಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಇದನ್ನು ಸಾರ್ವಜನಿಕ ಸಂಪರ್ಕದ ನಿರ್ವಹಣೆ ಎಂದು ಪರಿಗಣಿಸಬೇಕು. ತಮ್ಮ ಸರ್ಕಾರ ಮಾಡಿದ ಸಾಧನೆಗಳು, ಸರ್ಕಾರ ಕೊಡುಗೆಗಳನ್ನು ಸಿದ್ದರಾಮಯ್ಯ ಅವರು ಅವಕಾಶವಾಗಿ ಬಳಸಿಕೊಳ್ಳುತ್ತಿದ್ದಾರೆ. ಬಜೆಟ್ ಮಂಡನೆ ವೇಳೆ ಸಾಕಷ್ಟು ಭರವಸೆಗಳನ್ನು ನೀಡಬಹುದು ಆದರೆ, ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಬಂದ ಬಳಿಕವಷ್ಟೇ ಅವುಗಳನ್ನು ಅನುಷ್ಠಾನಕ್ಕೆ ತರಲು ಸಾಧ್ಯ ಎಂದು ಹೇಳಿದ್ದಾರೆ. 
ಚುನಾವಣೆ ಏಪ್ರಿಲ್ ಕೊನೆಯ ವಾರ ಅಥವಾ ಮೇ ಮೊದಲ ವಾರದಲ್ಲಿ ನಡೆದರೂ, ಬಜೆಟ್ ನಲ್ಲಿ ಘೋಷಣೆ ಮಾಡಿದ ಯೋಜನೆಗಳನ್ನು ಅನುಷ್ಠಾನಕ್ಕೆ ತರುವುದು ಕಷ್ಟಸಾಧ್ಯ. ಚುನಾವಣಾ ಆಯೋಗ ಒಮ್ಮೆ ರಾಜ್ಯದಲ್ಲಿ ನೀತಿ ಸಂಹಿತೆಯನ್ನು ಜಾರಿಗೆ ತಂದರೆ, ಮತ್ತೆ ಸರ್ಕಾರ ಹೊಸ ಕಾರ್ಯಗಳನ್ನು ಆರಂಭಿಸಲು ಸಾಧ್ಯವಿಲ್ಲ ಎಂದು ರಾಜಕೀಯ ತಜ್ಞ ಪ್ರೊ.ಸಂದೀಪ್ ಶಾಸ್ತ್ರಿಯವರು ಹೇಳಿದ್ದಾರೆ. 
ಸರ್ಕಾರಕ್ಕೆ ಬಹಳ ಕಡಿಮೆ ಸಮಯವಿದ್ದು, ಬಜೆಟ್ ನಲ್ಲಿ ಹೊಸ ಹೊಸ ಯೋಜನೆಗಳನ್ನು ಘೋಷಣೆ ಮಾಡಿದರೆ, ಅವುಗಳನ್ನು ಅನುಷ್ಠಾನದ ಕುರಿತು ಪ್ರಶ್ನೆಗಳು ಏಳುತ್ತವೆ. ಬಜೆಟ್ ಮಂಡನೆ ಪ್ರಮುಖವಲ್ಲ. ಜನರು ಅದನ್ನು ಪ್ರಾಥಮಿಕ ಹಂತದಲ್ಲಿ ನೋಡುತ್ತಾರೆ. ಹೀಗಾಗಿ ಬಜೆಟ್ ಮಂಡನೆ ದೊಡ್ಡ ಅವಕಾಶವೆಂದೆನಿಸುತ್ತಿಲ್ಲ ಎಂದು ತಿಳಿಸಿದ್ದಾರೆ. 
ಬಜೆಟ್ ಮಂಡನೆಗೆ ಭಾರೀ ಸಿದ್ಧತೆಗಳನ್ನು ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.18 ರಿಂದ ವಿವಿಧ ಸಂಘಟನೆಗಳು ಹಾಗೂ ಹಿರಿಯ ಅಧಿಕಾರಗಳೊಂದಿಗೆ ಸಭೆ, ಸಮಾಲೋಚನೆಗಳನ್ನು ನಡೆಸುತ್ತಲೇ ಇದ್ದಾರೆ. ಫೆ.4 ರವರೆಗೂ ಈ ಸಭೆಗಳು ನಡೆಯುತ್ತಲೇ ಇರುತ್ತವೆಂದು ಹೇಳಲಾಗುತ್ತಿದೆ. 
ರೈತರು, ಕೃಷಿಕರು, ಕಾರ್ಮಿಕರು ಹಾಗು ಇನ್ನಿತರೆ ವಲಯಗಳಿಗೆ ಸಹಾಯವಾಗುವ ಸಲುವಾಗಿ ಸರ್ಕಾರ ಚುನಾವಣೆಗೂ ಮುನ್ನ ಬಜೆಟ್ ಮಂಡನೆ ಮಾಡುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಬಜೆಟ್ ನಲ್ಲಿ ಘೋಷಣೆ ಮಾಡಿದ್ದನ್ನು ಸರ್ಕಾರ ಅನುಷ್ಠಾನಕ್ಕೆ ತರಲಿದೆ. ಒಂದು ವೇಳೆ ಬಿಜೆಪಿ ಅಥವಾ ಜೆಡಿಎಸ್ ಅಧಿಕಾರಕ್ಕೆ ಬಂದರೆ, ಅವುಗಳಲ್ಲಿ ಬದಲಾವಣೆಗಳನ್ನು ತರಬಹುದು ಎಂದು ಆರ್ಥಿಕ ತಜ್ಞ ಆರ್.ಎಸ್. ದೇಶಪಾಂಡೆಯವರು ತಿಳಿಸಿದ್ದಾರೆ. 
ಬಜೆಡ್ ಸರ್ಕಾರ ಅಧಿಕೃತ ಹೇಳಿಕೆಯಷ್ಟೇ. ಇದು ಅಗತ್ಯವಾದ ಕಾರ್ಯವಾಗಿದ್ದು, ಮಂಡನೆ ಮಾಡಲೇಬಿಕಿದೆ. ಮಾರ್ಚ್.31ರ ಬಳಿಕ ಸರ್ಕಾರ ಒಂದು ಪೈಸೆ ಹಣವನ್ನೂ ಕೂಡ ಖರ್ಚು ಮಾಡುವುದಕ್ಕೆ ಸಾಧ್ಯವಾಗುವುದಿಲ್ಲ. ಬಜೆಟ್ ಮಂಡನೆ ಜನರ ಮೇಲೆ ಪರಿಣಾಮ ಬೀರುತ್ತದೆ ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com