ಬೆಂಗಳೂರು: ಮಹದಾಯಿ ವಿವಾದ ಸಂಬಂಧ ಕನ್ನಟ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ನೀಡಿದ್ದ ಬಂದ್ ಕರೆ ಸಂಘಟನೆಗಳಲ್ಲೇ ಒಡಕುಂಟು ಮಾಡಿದೆ.
ಒಂದರ ಹಿಂದೆ ಒಂದರಂತೆ ಬಂದ್ ಗೆ ಕರೆ ನೀಡಿರುವುದಕ್ಕೆ ಹಲವು ಕನ್ನಡ ಪರ ಸಂಘಟನೆಗಳು ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿವೆ.
ಈ ನಡುವೆ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಾಟಾಳ್ ನಾಗರಾಜ್ ಅವರು, ಏನೇ ಆದರೂ ನನ್ನ ನಿರ್ಧಾರವನ್ನು ಸಡಿಲಿಸುವುದಿಲ್. ಈ ಹಿಂದೆ ಕರೆ ನೀಡಲಾಗಿದ್ದ ಬಂದ್'ನ್ನು ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
ಕರ್ನಾಟಕ ಸಂಘಟನೆಗಳ ಒಕ್ಕೂಟದ ಮುಖಂಡ ನಾಗೇಶ್ ಅವರು ಮಾತನಾಡಿ, ವಾಟಾಳ್ ನಾಗರಾಜ್ ಕರೆ ನೀಡಿರುವ ಬಂದ್'ಗೆ ನಮ್ಮ ಬೆಂಬಲವಿಲ್ಲ ಎಂದು ಹೇಳಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್ ಶೆಟ್ಟಿ ಮಾತನಾಡಿ, ಜ.25ರಂದು ಕರೆ ನೀಡಲಾಗಿರುವ ಬಂದ್'ಗೆ ಬೆಂಬಲ ನೀಡಬೇಕೋ ಅಥವಾ ಇಲ್ಲವೋ ಎಂಬುದರ ಬಗ್ಗೆ ಮಂಗಳವಾರ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.