ಸಂವಿಧಾನವೇ ನನ್ನ ಧರ್ಮ, ಅದರ ಆಶಯಗಳನ್ನು ಸಾಕಾರಗೊಳಿಸುವುದೇ ರಾಜಧರ್ಮ: ಸಿಎಂ ಸಿದ್ದರಾಮಯ್ಯ

ಸಂವಿಧಾನವೇ ನನ್ನ ಧರ್ಮ, ಅದರ ಆಶಯಗಳನ್ನು ಸಾಕಾರಗೊಳಿಸುವುದೇ ನನ್ನ ರಾಜಧರ್ಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 
ಬೆಂಗಳೂರು: ಸಂವಿಧಾನವೇ ನನ್ನ ಧರ್ಮ, ಅದರ ಆಶಯಗಳನ್ನು ಸಾಕಾರಗೊಳಿಸುವುದೇ ನನ್ನ ರಾಜಧರ್ಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
69ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಇಂದು ಆಕಾಶವಾಣಿಯ ಮೂಲಕ ರಾಜ್ಯದ ಜನತೆಗೆ ಸಂದೇಶ ನೀಡಿರುವ ಸಿಎಂ, ಸ್ವತಂತ್ರ ಭಾರತದ ಇತಿಹಾಸದಲ್ಲಿ ಜನವರಿ 26ಕ್ಕೆ ವಿಶೇಷವಾದ ಮಹತ್ವ ಇದೆ. 1947 ರ ಆಗಸ್ಟ್ 15 ನಾವು ಬ್ರಿಟಿಷರ ಗುಲಾಮಗಿರಿಯಿಂದ ಬಿಡುಗಡೆ ಪಡೆದ ಮಹತ್ವದ ದಿನವಾದರೆ, 1950 ರ ಜನವರಿ 26 ನ್ಯಾಯ, ಸ್ವಾತಂತ್ರ್ಯ, ಸಮಾನತೆ, ಸೋದರತ್ವ ಮತ್ತು ಜಾತ್ಯತೀತ ಮೌಲ್ಯಗಳ ಆಧಾರದಲ್ಲಿ ದೇಶವನ್ನು ಕಟ್ಟಲು ಸಂಕಲ್ಪಮಾಡಿದ ನಿರ್ಣಾಯಕ ದಿನ. ಸಂವಿಧಾನದ ಈ ಮೂಲಭೂತ ಆಶಯಗಳಿಗೆ ನಮ್ಮ ಸರ್ಕಾರ ಕೂಡಾ ಬದ್ಧವಾಗಿದೆ ಎಂದಿದ್ದಾರೆ.
ಸಂವಿಧಾನ ಪ್ರಜಾಪ್ರಭುತ್ವದ ರಾಷ್ಟ್ರದ ಆತ್ಮವಿದ್ದಂತೆ. ಆದರೆ ಇತ್ತೀಚಿಗೆ ಕೆಲ ಜನ ಅದನ್ನು ಟೀಕಿಸುತ್ತಿದ್ದಾರೆ ಮತ್ತು ಬದಲಾಯಿಸುವ ಮಾತನಾಡುತ್ತಿದ್ದಾರೆ. ನಾವೇಲ್ಲರೂ ಅಂತಹ ಸಂವಿಧಾನ ವಿರೋಧಿಗಳನ್ನು ಬಲವಾಗಿ ವಿರೋಧಿಸಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರಿಗೂ ಸಂವಿಧಾನದ ಬಗ್ಗೆ ಗೌರವ ಮತ್ತು ಅದರ ಆಶಯಗಳ ಬಗ್ಗೆ ಬದ್ಧತೆ ಇರಲೇಬೇಕು. ಸಂವಿಧಾನೇತರ ಶಕ್ತಿಗಳಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜಾಗ ಇಲ್ಲ. ಸಂವಿಧಾನದ ಬಗ್ಗೆ ಭಿನ್ನಾಭಿಪ್ರಾಯ ಇಟ್ಟುಕೊಂಡು ಸಂಸದೀಯ ಪ್ರಜಾಪ್ರಭುತ್ವದ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಾರದು. ಇದು ಸಂವಿಧಾನಕ್ಕೆ ಮಾಡುವ ಅಪಚಾರ ಮಾತ್ರವಲ್ಲ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ ಕೂಡಾ ಹೌದು.
ವಿಶ್ವಕ್ಕೆ ಮಾದರಿಯಾದ ಸಂವಿಧಾನವನ್ನು ನೀಡಿದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಈ ಸಂದರ್ಭದಲ್ಲಿ ನೆನಪು ಮಾಡಿಕೊಂಡು ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸಿಎಂ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com