"ಮುಗ್ಧ ಅಲ್ಪಸಂಖ್ಯಾತರ ವಿರುದ್ಧ ಇರುವ ಪ್ರಕರಣಗಳನ್ನು ವಾಪಸ್ ಪಡೆಯುವಂತೆ ಪತ್ರದಲ್ಲಿ ಸೂಚಿಸಲಾಗಿದ್ದು, ಕಳೆದ 5 ವರ್ಷಗಳಲ್ಲಿ ಅಲ್ಪಸಂಖ್ಯಾತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ವಾಪಸ್ ಪಡೆಯುವಂತೆ ಸೂಚನೆ ನೀಡಲಾಗಿದೆ. ಸರ್ಕಾರದ ನಡೆಗೆ ಹಲವು ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದ್ದು, ಬಹುಸಂಖ್ಯಾತರಲ್ಲಿ ಅಭದ್ರತೆ ಮೂಡಿಸುವಂತಹ ನಿರ್ಧಾರವಾಗಿದೆ ಎಂದು ಹಿಂದೂ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ.