ಸಿದ್ಧಗಂದಾ ಶ್ರೀಗಳು
ಸಿದ್ಧಗಂದಾ ಶ್ರೀಗಳು

ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಡಿಸ್ಚಾರ್ಜ್

ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ತುಮಕೂರು ಸಿದ್ಧಗಂಗಾ ಮಠದ ...
ಬೆಂಗಳೂರು: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ತುಮಕೂರು ಸಿದ್ಧಗಂಗಾ ಮಠದ ಶತಾಯುಷಿ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಶನಿವಾರ ಮಧ್ಯಾಹ್ನ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಕಳೆದ ಗುರುವಾರ ಸಿದ್ಧಗಂಗಾ ಶ್ರೀಗಳಿಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಜ್ವರ, ರಕ್ತದೊತ್ತಡ, ಮೂತ್ರಪಿಂಡದ ಸಮಸ್ಯೆ ಹಾಗೂ ಕಫ ಹೆಚ್ಚಾಗಿತ್ತು. ಹಾಗಾಗಿ ನಿನ್ನೆ ಬೆಳಗ್ಗೆ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇಂದು ಬೆಳಗ್ಗೆಯಿಂದಲೇ ನಾನು ಆಸ್ಪತ್ರೆಯಲ್ಲಿ ಇರಲ್ಲ, ನಾನು ಮಠಕ್ಕೆ ಹೋಗಬೇಕೆಂದು ಶ್ರೀಗಳು ಹಠ ಹಿಡಿದಿದ್ದರು. ಈ ಹಿನ್ನೆಲೆಯಲ್ಲಿ ವೈದ್ಯರು ಶ್ರೀಗಳ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಮಧ್ಯಾಹ್ನ ಡಿಸ್ಚಾರ್ಜ್ ಮಾಡಿದ್ದಾರೆ. ಟ್ರಾಫಿಕ್ ಮುಕ್ತ ಮಾಡಿ ಶ್ರೀಗಳನ್ನು ತುಮಕೂರು ಮಠಕ್ಕೆ ಕರೆದುಕೊಂಡು ಹೋಗಲಾಗಿದೆ.
ಶ್ರೀಗಳ ಪಿತ್ತಕೋಶ ಮತ್ತು ಮೇದೋಜೀರಕ ಗ್ರಂಥಿಯಲ್ಲಿ ಸಮಸ್ಯೆ ಉಂಟಾಗಿತ್ತು. ಇದರಿಂದ ಪಿತ್ತಕೋಶ ಬ್ಲಾಕ್‌ ಆಗುತ್ತಿದೆ. ಸ್ವಾಮೀಜಿಗೆ 110 ವರ್ಷ ವಯಸ್ಸಾಗಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಿಲ್ಲ. ಸ್ಟೆಂಟ್‌ಗಳ ಮೂಲಕವೇ ಬ್ಲಾಕ್‌ಗಳನ್ನು ಸರಿಪಡಿಸಬೇಕು. ಈ ಬಾರಿ ಒಂದು ಮೆಟಲ್‌ ಹಾಗೂ ಎರಡು ಪ್ಲಾಸ್ಟಿಕ್‌ ಸ್ಟೆಂಟ್‌ಗಳನ್ನು ಹಾಕಿದ್ದೇವೆ. ಅವರಿಗೆ ಈವರೆಗೆ ಒಟ್ಟು ಎಂಟು ಸ್ಟೆಂಟ್‌ ಅಳವಡಿಸಲಾಗಿದೆ ಎಂದು ಬಿಜಿಎಸ್‌ ಆಸ್ಪತ್ರೆಯ ವೈದ್ಯ ಡಾ.ರವೀಂದ್ರನಾಥ್ ಅವರು ತಿಳಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com