ರಾಜ್ಯ

ಪ್ರೀತಿ ನಿರಾಕರಿಸಿದ ಯುವತಿಯ ಅತ್ಯಾಚಾರ ಗೈದು ಕತ್ತು ಸೀಳಿ ಕೊಂದ ದುಷ್ಕರ್ಮಿ!

ಪ್ರೀತಿ ನಿರಾಕರಿಸಿದ ಯುವತಿಯ ಅತ್ಯಾಚಾರ ಗೈದು ಕತ್ತು ಸೀಳಿ ಕೊಂದ ದುಷ್ಕರ್ಮಿ!
ಸಾಂದರ್ಭಿಕ ಚಿತ್ರ
Published On :
ಬೀದರ್: ತನ್ನ ಪ್ರೀತಿ ನಿರಾಕರಿಸಿದಳು ಎಂಬ ಒಂದೇ ಕಾರಣಕ್ಕೆ ಯುವತಿಯನ್ನು ಎಳೆದೊಯ್ದ ದುಷ್ಕರ್ಮಿಯೋರ್ವ ಆಕೆಯ ಮೇಲೆ ಬಲಾತ್ಕಾರ ಮಾಡಿ ಬಳಿಕ ಆಕೆಯ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಬೀದರ್ ನಲ್ಲಿ ನಡೆದಿದೆ.
ಬೀದರ್ ನ ಬಾಲ್ಕಿ ತಾಲೂಕಿನ ಕೋಸಮ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಿಎ ಪದವಿ ವ್ಯಾಸಂಗ ಮಾಡುತ್ತಿದ್ದ ಪೂಜಾ ಎಂಬ ವಿದ್ಯಾರ್ಥಿನಿ ಕೊಲೆಯಾದ ಯುವತಿಯಾಗಿದ್ದಾಳೆ. ಇನ್ನು ಪ್ರಕರಣ ಸಂಬಂಧ ಬಾಲ್ಕಿ ಪೊಲೀಸರು 24  ವರ್ಷದ ಆರೋಪಿ ಶಂಸುದ್ದೀನ್ ಎಂಬಾತನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸ್ ಮೂಲಗಳ ಪ್ರಕಾರ ಆರೋಪಿ ಶಂಸುದ್ದೀನ್, ಕಳೆದ ಎರಡು ವರ್ಷಗಳಿಂದ ಪೂಜಾಳನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದನಂತೆ. ನಿನ್ನೆಯೂ ಈ ಬಗ್ಗೆ ಪೂಜಾಳ ಬಳಿ ಪ್ರಸ್ತಾಪ ಮಾಡಿ ಆಕೆ ಒಪ್ಪದಿದ್ದಾಗ ಆಕೆಯನ್ನು  ಬಲವಂತವಾಗಿ ಖಾನಾಪುರ ಅರಣ್ಯ ಪ್ರದೇಶಕ್ಕೆ ಎಳೆದೊಯ್ದು ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ಬಳಿಕ ಆಕೆಯ ಕತ್ತು ಸೀಳಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಅರಣ್ಯದಲ್ಲಿ ಯುವತಿಯ ಮೃತದೇಹ ಕಂಡ ಸ್ಥಳೀಯರು  ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪೂಜಾಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. 
ಬಳಿಕ ತನಿಖೆ ನಡೆಸಿದ ಪೊಲೀಸರು ಆರೋಪಿ ಶಂಸುದ್ದೀನ್ ನನ್ನು ಬಂಧಿಸಿದ್ದು, ಪ್ರಕರಣದ ವಿಚಾರಣೆ ಮುಂದುವರೆಸಿದ್ದಾರೆ. ಇನ್ನು ಮಗಳನ್ನು ಕಳೆದುಕೊಂಡ ಪೂಜಾಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ನಿನ್ನೆ ರಾತ್ರಿ  ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಈಶ್ವರ್ ಖಂಡ್ರೆ ಹತ್ಯೆಗೀಡಾದ ಯುವತಿಯ ಪೋಷಕರಿಗೆ ಸಾಂತ್ವನ ಹೇಳಿದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.