ಅಲ್ಲದೆ ಮಂಗಳವಾರ ಬೀದರ್ ಬಂದ್ ಗೆ ಕರೆ ನೀಡಲಾಗಿದ್ದು, ಇದೀಗ ಬೀದರ್ ನಲ್ಲಿ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಬಿಜೆಪಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಿಂದ ಬೆಂಬಲ ವ್ಯಕ್ತವಾಗಿದ್ದು, ನಗರದಲ್ಲಿ ಯಾವುದೇ ಬಸ್, ಆಟೋಗಳು ರಸ್ತೆಗಿಳಿದಿಲ್ಲ ಎಂದು ತಿಳಿದುಬಂದಿದೆ. ಪ್ರಸ್ತುತ ಬೀದರ್ ನಲ್ಲಿ ಜನಜೀವನ ಸಂಪೂರ್ಣ ಸ್ಥಬ್ದವಾಗಿದ್ದು, ಅಂಗಡಿ ಮಾಲೀಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವ ಮೂಲಕ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.