ಬೀದರ್ ಬಂದ್ ವೇಳೆ ಪೊಲೀಸರು, ಪ್ರತಿಭಟನಾಕಾರರ ಮಧ್ಯೆ ಘರ್ಷಣೆ: 10 ಮಂದಿಗೆ ಗಾಯ

ವಿದ್ಯಾರ್ಥಿನಿ ಪೂಜಾ ಹಡಪದ ಹತ್ಯೆಗೆ ತೀವ್ರ ಖಂಡನೆ ವ್ಯಕ್ತಪಡಿಸಿ ಹಿಂದೂಪರ ಸಂಘಟನೆಗಳು ನೀಡಿದ್ದ ಬಂದ್ ಕರೆ ಮಂಗಳವಾರ ಹಿಂಸಾಚಾರಕ್ಕೆ ತಿರುಗಿತ್ತು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಘರ್ಷಣೆ ಏರ್ಪಟ್ಟು 10 ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ...
ಪ್ರತಿಭಟನಾಕಾರರನ್ನು ಚದುರಿಸಲು ಲಾಠಿ ಚಾರ್ಜ್ ನಡೆಸುತ್ತಿರುವ ಪೊಲೀಸರು
ಪ್ರತಿಭಟನಾಕಾರರನ್ನು ಚದುರಿಸಲು ಲಾಠಿ ಚಾರ್ಜ್ ನಡೆಸುತ್ತಿರುವ ಪೊಲೀಸರು
ಬೀದರ್: ವಿದ್ಯಾರ್ಥಿನಿ ಪೂಜಾ ಹಡಪದ ಹತ್ಯೆಗೆ ತೀವ್ರ ಖಂಡನೆ ವ್ಯಕ್ತಪಡಿಸಿ ಹಿಂದೂಪರ ಸಂಘಟನೆಗಳು ನೀಡಿದ್ದ ಬಂದ್ ಕರೆ ಮಂಗಳವಾರ ಹಿಂಸಾಚಾರಕ್ಕೆ ತಿರುಗಿತ್ತು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಘರ್ಷಣೆ ಏರ್ಪಟ್ಟು 10 ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. 
ಬಂದ್ ಆಚರಣೆ ವೇಳೆ ಕಲ್ಲು, ಚಪ್ಪಲಿ ತೂರಾಟ ನಡೆದಿದ್ದು, ಪೊಲೀಸರು ಹಲವು ಸುತ್ತಿನ ಲಾಠಿ ಪ್ರಹಾರ ನಡೆಸಿದ್ದಾರೆ. ಈ ಹಿನ್ನಲೆಯಲ್ಲಿ ಬೀದರ್ ನಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿತ್ತು. 
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕೋಸಂ ಗ್ರಾಮ ಮೂಲದ ವಿದ್ಯಾರ್ಥಿನಿ ಪೂಜಾ ಹಡಪದ (21) ವಿದ್ಯಾರ್ಥಿನಿಯನ್ನು ಅದೇ ಗ್ರಾಮದ ಶಾಹಬೋದ್ದೀನ್ (24) ಎಂಬ ಯುವಕ ಖಾನಾಪುರ್ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದ ಘಟನೆ ಜ.27 ರ ಸಂಜೆ ನಡೆದಿತ್ತು. ಹತ್ಯೆಯ ಹಿಂದೆ ಲವ್ ಜಿಹಾದ್ ಅನುಮಾನವಿದ್ದು, ಉನ್ನತ ತನಿಖೆಗೆ ಆಗ್ರಹಿಸಿ ನಡೆದ ಬಂದ್ ವೇಳೆ ಡಿಸಿ ಕಚೇರಿ ಮುಂದೆ ಪ್ರತಿಭಟನಾಕಾರರು ಹಾಗೂ ಪೊಲೀಸ್ ಮಧ್ಯೆ ವಾಗ್ವಾದ ನಡೆದಿದೆ.
ಅಲ್ಪಸಂಖ್ಯಾತರೇ ಹೆಚ್ಚಿರುವ ನಗರದ ಹಳೇ ಭಾಗದಲ್ಲಿ ರ್ಯಾಲಿ ನಡೆಸುವ ಕುರಿತಾಗಿ ಅನುಮತಿ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಮುಖಂಡರು ಆಗ್ರಹಿಸುತ್ತಿದ್ದರು. ಅನುಮತಿ ಪಡೆಯದೇ ಇರುವುದರಿಂದ ಪೊಲೀಸರು ಇದಕ್ಕೆ ನಿರಾಕರಿಸಿದ್ದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ನಡೆದ ವಾಗ್ವಾದ ಹಿಂಸಾಚಾರಕ್ಕೆ ತಿರುವಂತೆ ಮಾಡಿತ್ತು. 
ವಾಗ್ವಾದ ಸಂದರ್ಭದಲ್ಲಿ ಕೆಲವರು ಹಳೇ ಬೀದರ್ ಭಾಗಕ್ಕೆ ಬೈಕ್ ಮೇಲೆ ತೆರಳಲು ಮುಂದಾಗುತ್ತಿದ್ದಂತೆಯೇ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಲು ಮುಂದಾದಾದಾಗ ಕಲ್ಲು, ಚಪ್ಪಲಿ ತೂರಾಟ ನಡೆದಿದೆ. 
ಬಂದ್ ಹಿನ್ನಲೆಯಲ್ಲಿ ಜಿಲ್ಲಾಯಾದ್ಯಂತ ಖಾಸಗಿ ಶಾಲಾ ಕಾಲೇಜುಗಳು ರಜೆ ಘೋಷಣೆ ಮಾಡಿದ್ದವು. ಅಂಗಡಿ ಮುಗ್ಗಟ್ಟುಗಳು ಮುಚ್ಚಿದ್ದವಲ್ಲದೆ, ಸಾರಿಗೆ ಸಂಸ್ಥೆಯ ಬಸ್ ಗಳು ರಸ್ತೆಗಿಳಿಯದ್ದರಿಂದ ಪ್ರಯಾಣಿಕರು ಸಂಕಷ್ಟ ಎದುರಿಸುವಂತಾಗಿತ್ತು. ಇತರ ತಾಲೂಕುಗಳಲ್ಲಿ ವ್ಯಾಪಾರ ವಹಿವಾಟು, ಸಾರಿಗೆ ಸಂಚಾರ ಸ್ಥಗಿತಗೊಂಡು ಶಾಂತಿಯುತವಾಗಿ ಪ್ರತಿಭಟನೆಗಳು ನಡೆದವು. 
ಹಿಂಸಾಚಾರ ಕುರಿತಂತೆ ಹೇಳಿಕೆ ನೀಡಿರುವ ಭಾಗವಾಂತ್ ಖುಬಾ ಅವರು, ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ, ಅವರಾರೂ ಪ್ರತಿಭಟನಾಕಾರರಾಗಿರಲಿಲ್ಲ. ಜಿಲ್ಲಾ ಬಿಜೆಪಿ ಈಗಾಗಲೇ ಡಿಸಿಗೆ ಮನವಿ ಪತ್ರ ಸಲ್ಲಿಸಿದ್ದು, ಲಾಠಿ ಚಾರ್ಜ್ ಕುರಿತಂತೆ ನ್ಯಾಯಾಂಗ ತನಿಖೆಗೆ ನಡೆಸುವಂತೆ ಮನವಿಯಲ್ಲಿ ತಿಳಿಸಿದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com