ಮುಂದಿನ ನಾಲ್ಕು ದಿನ ಸಾಧಾರಣ ಮಳೆ ಸಾಧ್ಯತೆ - ಹವಾಮಾನ ಇಲಾಖೆ

ಮುಂದಿನ ಮೂರು ಅಥವಾ ನಾಲ್ಕು ದಿನಗಳ ಕಾಲ ಬೆಂಗಳೂರಿನಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಸಾಂದರ್ಭಿಕ
ಸಾಂದರ್ಭಿಕ

ಬೆಂಗಳೂರು: ಮುಂದಿನ ಮೂರು ಅಥವಾ ನಾಲ್ಕು ದಿನಗಳ ಕಾಲ ಬೆಂಗಳೂರಿನಲ್ಲಿ  ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ  ಅಧಿಕಾರಿಗಳು ತಿಳಿಸಿದ್ದಾರೆ.ಆದಾಗ್ಯೂ, ವಾರಾಂತ್ಯದಲ್ಲಿ  ಮುಂಗಾರು ಮಳೆ ಬಲಗೊಳ್ಳುವ ಸಾಧ್ಯತೆ ಇದ್ದು, ಪ್ರವಾಸಕ್ಕೆ ತೆರಳಬೇಕು ಎಂದುಕೊಂಡವರು ಎಚ್ಚರಿಕೆ ವಹಿಸಬೇಕಾಗಿದೆ ಅಗತ್ಯವಿದೆ.

ರಾಜ್ಯದಾದ್ಯಂತ ಉತ್ತಮ ಮುಂಗಾರು ಮಳೆಯಾಗುತ್ತಿದ್ದು, ಆರಂಭದ ತಿಂಗಳಲ್ಲೇ ಶೇ.33 ರಷ್ಟು ಮಳೆ ದಾಖಲಾಗಿದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿನ ಹವಾಮಾನ ವೈಫರೀತ್ಯದಿಂದ ಎರಡು ಮೂರು ದಿನದಿಂದ ಮುಂಗಾರು ದುರ್ಬಲಗೊಂಡಿತ್ತು ಎಂದು  ಹವಾಮಾನ ಇಲಾಖೆ  ವಿಜ್ಞಾನಿ  ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಈವರೆಗೂ   ಹವಾಮಾನ ವ್ಯವಸ್ಥೆಯಲ್ಲಿ ಅಂತಹ ಬದಲಾವಣೆಯೇನೂ ಕಂಡುಬಂದಿಲ್ಲ. ಮುಂಗಾರು ದುರ್ಬಲಗೊಂಡಿದ್ದು, ಈ ವಾರದಲ್ಲಿ ಭಾರೀ ಮಳೆ ಅಸಂಭವವಾಗಿದೆ. ಜೂನ್ ತಿಂಗಳಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ  355   ಮಿಲಿಮೀಟರ್ ಮಳೆಯಾಗಿದೆ ಎಂದು ಅವರು ಹೇಳಿದ್ದಾರೆ.

ಹಾಸನ ಜಿಲ್ಲೆ ಮಲೆನಾಡು ಭಾಗದಲ್ಲಿ ಅತಿ ಹೆಚ್ಚಿನ 611 ಮಿಲಿ ಮೀಟರ್ ಮಳೆಯಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು,  ಮತ್ತು ಕೊಡಗಿನಲ್ಲಿ ಅತಿ ಹೆಚ್ಚಿನ ಮಳೆಯಾಗಿದ್ದು, ರಾಜ್ಯದ ಪ್ರಮುಖ ನದಿಗಳ  ಒಳಹರಿವು ಹೆಚ್ಚಳಗೊಂಡಿದೆ.ಕಲಬುರಗಿ ಜಿಲ್ಲೆಯಲ್ಲಿ  ಕಡಿಮೆ ಪ್ರಮಾಣದ 100 ಮಿಲಿ ಮೀಟರ್ ಮಳೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com