ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಮಾದನಾಯಕಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಕಂಟೇನರ್ ಮತ್ತು ಕಾರು ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಮೃತರನ್ನು ನೇವಿಲ್ (26) ಕಾರು ಚಾಲಕ, ಮಂದಾರ (20) ರುಕ್ಮೀಣಿ (19) ಎಂದು ಗುರುತಿಸಲಾಗಿದ್ದು, ಮಹೇಂದ್ರ ಹಾಗೂ ಮನೋಹರ ಗಾಯಗೊಂಡಿದ್ದು, ಅವರನ್ನು ನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಬಳ್ಳಾರಿ ಜಿಲ್ಲೆಯ ಹೊಸಪೆಟೆಯಲ್ಲಿ ಸಂಬಂಧಿಕರ ಮದುವೆ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಮೃತರು ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲೂಕಿನ ಕೋಮರನಗಟ್ಟ ನಿವಾಸಿಗಳಾಗಿದ್ದು, ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು.
ಈ ಸಂಬಂಧ ತುರುವನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನಾ ಸ್ಥಳಕ್ಕೆ ಪಿಎಸ್ಐ ಶ್ರೀನಿವಾಸ ಭೇಟಿ ನೀಡಿ ಪರಿಶೀಲಿಸಿದರು. ತುರುವನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.