ತುಮಕೂರು: ತುಮಕೂರು ಜಿಲ್ಲೆಯ ಮಧುಗಿರಿ ಸಮೀಪ ಬುಧವಾರ ಸಿಮೆಂಟ್ ಲಾರಿ ಮತ್ತು ಕಾರು ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ..ಇಂದು ಪಾವಗಡದಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿ ಮರಳುವಾಗ ಮಧುಗಿರಿ-ತುಮಕೂರು ರಸ್ತೆಯ ಕೆರೆಗಳ ಪಾಳ್ಯ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ..ಮೃತರೆಲ್ಲರೂ ಬೆಂಗಳೂರಿನ ಬೈಯಪ್ಪನಹಳ್ಳಿ ನಿವಾಸಿಗಳು ಎಂದು ತಿಳಿದುಬಂದಿದೆ..ಈ ಸಂಬಂಧ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos