ಚಿತ್ರದುರ್ಗ: ಎಂಬಿಬಿಎಸ್ ದ್ವಿತೀಯ ವರ್ಷದ ಪ್ರಶ್ನೆಪತ್ರಿಕೆ ಸೋರಿಕೆ

ವೈದ್ಯಕೀಯ ಶಿಕ್ಷಣ (ಎಂಬಿಬಿಎಸ್) ನ ದ್ವಿತೀಯ ವರ್ಷದ ಮೈಕ್ರೋ ಬಯಾಲಜಿ -೧ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂದು ವದಂತಿಯೊಂದು ಸಾಮಾಜಿಕ ತಾಣಗಳಲ್ಲಿ ಹರಡಿದೆ.
ಚಿತ್ರದುರ್ಗ: ಎಂಬಿಬಿಎಸ್ ದ್ವಿತೀಯ ವರ್ಷದ ಪ್ರಶ್ನೆಪತ್ರಿಕೆ ಸೋರಿಕೆ
ಚಿತ್ರದುರ್ಗ: ಎಂಬಿಬಿಎಸ್ ದ್ವಿತೀಯ ವರ್ಷದ ಪ್ರಶ್ನೆಪತ್ರಿಕೆ ಸೋರಿಕೆ
ಚಿತ್ರದುರ್ಗ: ವೈದ್ಯಕೀಯ ಶಿಕ್ಷಣ (ಎಂಬಿಬಿಎಸ್) ನ ದ್ವಿತೀಯ ವರ್ಷದ ಮೈಕ್ರೋ ಬಯಾಲಜಿ -1  ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂದು ವದಂತಿಯೊಂದು ಸಾಮಾಜಿಕ ತಾಣಗಳಲ್ಲಿ ಹರಡಿದೆ. ಇದರಿಂದಾಗಿ ಪರೀಕ್ಷೆ ತೆಗೆದುಕೊಳ್ಳುತ್ತಿರುವ ವಿದ್ಯಾರ್ಥಿಗಳು ಆತಂಕಿತರಾಗಿದ್ದಾರೆ.
ರಾಜ್ಯಾದ್ಯಂತ ವೈದ್ಯಕೀಯ ಪದವಿ ಪರೀಕ್ಷೆಗಳು ನಡೆಯುತ್ತಿದ್ದು ಶನಿವಾರ ಬೆಳಿಗ್ಗೆ ಎಂಬಿಬಿಎಸ್ ದ್ವಿತೀಯ ವರ್ಷದ ಪರೀಕ್ಷೆಗಳು ಒಂಭತ್ತಕ್ಕೆ ಪ್ರಾರಂಭವಾಗಿದೆ. ಆದರೆ ಪರೀಕ್ಷೆ ಪ್ರಾರಂಭವಾದ ಹತ್ತು ನಿಮಿಷದಲ್ಲಿ ಪ್ರಶ್ನೆಪತ್ರಿಕೆ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿರುವುದು ತಿಳಿದಿದೆ.
ಸೋರಿಕೆಯಾಗಿರುವ ಪ್ರಶ್ನೆಪತ್ರಿಕೆ ಅಸಲಿಯಾಗಿದೆ ಎಂದು ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಕಾಲೇಜು ಪರೀಕ್ಷಾ ವಿಭಾಗ ಮುಖ್ಯಸ್ಥರಾದ ಡಾ. ಪ್ರಶಾಂತ್ ಖಚಿತಪಡಿಸಿದ್ದಾರೆ. 
ಚಿತ್ರದುರ್ಗದಲ್ಲಿ ಸಹ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ಹೌದಾದರೂ ನಮ್ಮ ಕಾಲೇಜಿನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ, ಈ ಸಂಬಂಧ ತನಿಖೆಗೆ ನಾವು ಸಿದ್ದರಿದ್ದೇವೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com