ಚಿನ್ನಸ್ವಾಮಿ ಸ್ಟೇಡಿಯಂ ಸ್ಫೋಟ ಪ್ರಕರಣ: ಮೂವರಿಗೆ 7 ವರ್ಷ ಜೈಲು ಶಿಕ್ಷೆ

ಐಪಿಎಲ್ ಪಂದ್ಯಾವಳಿ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಕಾಂಪೌಡ್ ನಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದ...
ಸ್ಫೋಟ ನಡೆದ ಸ್ಥಳ ಪರಿಶೀಲಿಸುತ್ತಿರುವ ಅಧಿಕಾರಿಗಳು(ಸಂಗ್ರಹ ಚಿತ್ರ)
ಸ್ಫೋಟ ನಡೆದ ಸ್ಥಳ ಪರಿಶೀಲಿಸುತ್ತಿರುವ ಅಧಿಕಾರಿಗಳು(ಸಂಗ್ರಹ ಚಿತ್ರ)
ಬೆಂಗಳೂರು: ಐಪಿಎಲ್ ಪಂದ್ಯಾವಳಿ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಕಾಂಪೌಡ್ ನಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದ 14 ಆರೋಪಿಗಳ ಪೈಕಿ ಮೂವರಿಗೆ ಎನ್ ಐಎ ವಿಶೇಷ ಕೋರ್ಟ್ ಸೋಮವಾರ 7 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶ ಸಿದ್ದಲಿಂಗ ಪ್ರಭು ಅವರು ಇಂದು ತಪ್ಪೊಪ್ಪಿಕೊಂಡ ಮೂವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ.
ಕಳೆದ ಬುಧವಾರ ಸ್ಫೋಟ ಪ್ರಕರಣದ 5ನೇ ಆರೋಪಿಯಾಗಿರುವ ಗೌಹಾರ್ ಅಜೀಜ್ ಖೋಮೆನಿ, 12ನೇ ಆರೋಪಿ ಕಮಲ್ ಹಸನ್ ಅಲಿಯಾಸ್ ಕಮಲ್ ಹಾಗೂ 13ನೇ ಆರೋಪಿ ಮೊಹಮ್ಮದ್ ಕಫೀಲ್ ಅಖ್ತರ್ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದರು. ಉಳಿದ ಆರೋಪಿಗಳ ಬಗ್ಗೆ ತನಿಖೆ ಮುಂದುವರೆದಿದೆ.
2010ರ ಏಪ್ರಿಲ್‌ 17ರಂದು ಐಪಿಎಲ್‌ ಪಂದ್ಯ ಆರಂಭಕ್ಕೆ ಮುನ್ನ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಮೂರು ಬಾಂಬ್‌ ಸ್ಫೋಟಗೊಂಡಿದ್ದವು. ಘಟನೆಯಲ್ಲಿ ಪೊಲೀಸರು ಸೇರಿದಂತೆ 15 ಜನ ಗಾಯಗೊಂಡಿದ್ದರು. ಇದೇ ವೇಳೆ ಸ್ಫೋಟಗೊಳ್ಳದ ಎರಡು ಬಾಂಬ್‌ಗಳು ದೊರಕಿದ್ದವು. 
ಉಗ್ರ ಯಾಸಿನ್‌ ಭಟ್ಕಳ ಸೇರಿದಂತೆ ಒಟ್ಟು 14 ಉಗ್ರರು ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com