ಈ ವರ್ಷ ವೃತ್ತಿಪರ ಕೋರ್ಸ್ ಗಳ ಶುಲ್ಕ ಶೇ.8ರಷ್ಟು ಹೆಚ್ಚಳ

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ರಾಜ್ಯ ಸರ್ಕಾರ ಎಂಜಿನಿಯರಿಂಗ್ ಕೋರ್ಸ್ ಗಳ ಶುಲ್ಕವನ್ನು ಶೇಕಡಾ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ರಾಜ್ಯ ಸರ್ಕಾರ ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕೋರ್ಸ್ ಗಳ ಶುಲ್ಕವನ್ನು ಶೇಕಡಾ 8ರಷ್ಟು ಹೆಚ್ಚಿಸಿದೆ. ಉನ್ನತ ಶಿಕ್ಷಣ ಇಲಾಖೆ ತನ್ನ ಹಿಂದಿನ ನಿರ್ಧಾರದಿಂದ ಹಿಂದೆ ಸರಿದಿದೆ. ಕಳೆದ ವರ್ಷ ವೃತ್ತಿಪರ ಶಿಕ್ಷಣಗಳ ಕೋರ್ಸ್ ಗಳನ್ನು ಶೇಕಡಾ 10ರಷ್ಟು ಹೆಚ್ಚಳ ಮಾಡಿತ್ತು. ಕೊನೆಗೆ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗಿ ಬರುವ ಸಾಧ್ಯತೆಯಿರುವುದರಿಂದ ಸರ್ಕಾರ ಶೇಕಡಾ 8ರಷ್ಟು ಶುಲ್ಕ ಹೆಚ್ಚಿಸಲು ತೀರ್ಮಾನಿಸಿದೆ.

ಉನ್ನತ ಶಿಕ್ಷಣ ಇಲಾಖೆ ಮೂಲಗಳು ಹೇಳುವ ಪ್ರಕಾರ, ರಾಜ್ಯ ಸರ್ಕಾರ ರಚಿಸಿರುವ ಶುಲ್ಕ ನಿಯಂತ್ರಣ ಸಮಿತಿ ಶುಲ್ಕ ಹೆಚ್ಚಳಕ್ಕೆ ಶಿಫಾರಸು ಮಾಡಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಸಮಿತಿಯ ಶಿಫಾರಸುಗಳನ್ನು ಜಾರಿಗೆ ತರಲು ತೀರ್ಮಾನಿಸಿದೆ. ಉನ್ನತ ಶಿಕ್ಷಣ ಇಲಾಖೆ ಶೇಕಡಾ 10ರಷ್ಟು ಶುಲ್ಕ ಹೆಚ್ಚಳಕ್ಕೆ ತೀರ್ಮಾನಿಸಿತ್ತು.

ನಿನ್ನೆ ಇಲಾಖೆಯ ಅಧಿಕಾರಿಗಳು ಖಾಸಗಿ ಎಂಜಿನಿಯರಿಂಗ್ ಕಾಲೇಜು ವ್ಯವಸ್ಥಾಪಕ ಪ್ರತಿನಿಧಿಗಳ ಜೊತೆ ಚರ್ಚೆ ನಡೆಸಿ ಕಾನೂನು ಪರಿಣಾಮಗಳ ಸಾಧ್ಯತೆ ಕುರಿತು ಚರ್ಚಿಸಿದರು. ರಾಜ್ಯ ಸರ್ಕಾರ ಶೇಕಡಾ 8ರಷ್ಟು ಶುಲ್ಕ ಹೆಚ್ಚಿಸದಿದ್ದರೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಸಮಿತಿಯ ಮುಖ್ಯಸ್ಥ ಡಿ ವೈ ಶೈಲೇಂದ್ರ ಕುಮಾರ್ ಹೇಳಿದರು.

ಶೇಕಡಾ 8ರಷ್ಟು ಶುಲ್ಕ ಎಲ್ಲಾ ವೃತ್ತಿಪರ ಕೋರ್ಸ್ ಗಳಿಗೆ ಅನ್ವಯವಾಗುತ್ತದೆ. ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ಆಯುರ್ವೇದಗಳಿಗೆ ಅನ್ವಯ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com