ಈಗಾಗಲೇ ಕರ್ನಾಟಕದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರು, ರಾಮನಗರ ಹಾಗೂ ಮಂಡ್ಯದಿಂದ ಸಾಕಷ್ಟು ನೀರು ತಮಿಳುನಾಡಿಗೆ ಹರಿದುಹೋಗುತ್ತದೆ. ಇದರ ಜೊತೆಗೆ ಜಲಾಶಯದಿಂದಲೂ ಅಲ್ಪ ಪ್ರಮಾಣದ ನೀರು ತಮಿಳುನಾಡಿಗೆ ಹರಿಯಬಿಟ್ಟರೆ ಜುಲೈ ತಿಂಗಳಲ್ಲಿ ಬಿಡಬೇಕಾದ ನೀರಿನ ಪ್ರಮಾಣ ಸರಿಯಾಗುತ್ತದೆ. ಹೀಗಾಗಿ ಜುಲೈ ತಿಂಗಳಲ್ಲಿ ಬಿಡಬೇಕಾದ ನೀರನ್ನು ಬಿಡಬೇಕೆಂದು ಸಿಎಂ ಸೂಚಿಸಿದ್ದಾರೆ.