ವಾರದೊಳಗೆ ಕೆಂಪೇಗೌಡ ಲೇಔಟ್ ನಿವೇಶನ ಹಂಚಿಕೆ- ಡಾ. ಜಿ. ಪರಮೇಶ್ವರ್

ಒಂದು ವಾರದೊಳಗೆ ನಾಡಪ್ರಭು ಕೆಂಪೇಗೌಡ ಬಡಾವಣೆಯ ಎರಡನೇ ಹಂತದ 5 ಸಾವಿರ ನಿವೇಶನಗಳನ್ನು ಹಂಚಿಕೆ ಪ್ರಕ್ರಿಯೆಯನ್ನು ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ ಕೈಗೆತ್ತಿಕೊಳ್ಳಲಿದೆ ಎಂದು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಡಾ. ಜಿ. ಪರಮೇಶ್ವರ್
ಡಾ. ಜಿ. ಪರಮೇಶ್ವರ್
Updated on

ಬೆಂಗಳೂರು: ಇನ್ನೂ ಒಂದು ವಾರದೊಳಗೆ ನಾಡಪ್ರಭು  ಕೆಂಪೇಗೌಡ ಬಡಾವಣೆಯ ಎರಡನೇ ಹಂತದ  5 ಸಾವಿರ ನಿವೇಶನಗಳನ್ನು  ಹಂಚಿಕೆ ಪ್ರಕ್ರಿಯೆಯನ್ನು ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ ಕೈಗೆತ್ತಿಕೊಳ್ಳಲಿದೆ ಎಂದು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ  ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ವಿಧಾನಪರಿಷತ್ತಿನಲ್ಲಿಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕೆಂಪೇಗೌಡ ಬಡಾವಣೆಯಲ್ಲಿನ ನಿವೇಶನ  ಹಂಚಿಕೆಗೆ ಸಂಬಂಧಿಸಿದಂತೆ ಆಕ್ಷೇಪಗಳನ್ನು ಬಿಡಿಎ ಈಗಾಗಲೇ ಆಹ್ವಾನಿಸಿದೆ. ಜುಲೈ 1 ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನವಾಗಿತ್ತು ಎಂದು ತಿಳಿಸಿದರು.

 ಆಕ್ಷೇಪಣೆ ಸ್ವೀಕರಿಸಿದ ನಂತರ ವಾರದೊಳಗೆ ನಿವೇಶನ ಹಂಚಿಕೆ ಪ್ರಕ್ರಿಯೆಯನ್ನು  ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪರಮೇಶ್ವರ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com