ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಸರ್ಕಾರಿ ಪಿಯುಸಿ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ತರಬೇತಿ

ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶಪಡೆಯುವ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶಪಡೆಯುವ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಹೀಗಾಗಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯ ಸರ್ಕಾರದ ಪದವಿಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಷಯದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗಲಿದೆ.

ಪ್ರತಿ ವಾರ ಬುಧವಾರ, ಗುರುವಾರ, ಶುಕ್ರವಾರ ಹಾಗೂ ಶನಿವಾರಗಳಂದು 15 ಗಂಟೆ ಬೆಳಗ್ಗೆ 7.30ರಿಂದ 9 ಗಂಟೆಯವರೆಗೆ ತರಬೇತಿ ನೀಡಲಾಗುತ್ತದೆ. ಆಗಸ್ಟ್ ತಿಂಗಳಿನಿಂದ ತರಬೇತಿಗಳು ಆರಂಭವಾಗಲಿದ್ದು ವಿದ್ಯಾರ್ಥಿಗಳ ಹಾಜರಿ ಕಡ್ಡಾಯವಾಗಿರುತ್ತದೆ. ವರ್ಷಕ್ಕೆ ಎರಡು ಸಲ ಪೂರ್ವತಯಾರಿ ಪರೀಕ್ಷೆ ನಡೆಸಲಾಗುತ್ತದೆ.

ಈ ಯೋಜನೆಯನ್ನು ಇತ್ತೀಚೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್ ನಲ್ಲಿ ಘೋಷಿಸಿದ್ದರು. ರಾಜ್ಯದ 250 ಸರ್ಕಾರಿ ಪಿಯುಸಿ ಕಾಲೇಜುಗಳಲ್ಲಿ ತರಬೇತಿಗಳನ್ನು ಆರಂಭಿಸುವುದರ ಬಗ್ಗೆ ಪದವಿಪೂರ್ವ ಶಿಕ್ಷಣ ಇಲಾಖೆ ಈಗಾಗಲೇ ಪ್ರಸ್ತಾವನೆಯನ್ನು ಉನ್ನತ ಶಿಕ್ಷಣ ಇಲಾಖೆಗೆ ಸಲ್ಲಿಸಿದೆ. ರಾಜ್ಯ ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಗಳ ಸಹಯೋಗದಲ್ಲಿ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನಗಳ ಅಭಿಯಾನದಡಿಯಲ್ಲಿ ಈ ತರಬೇತಿಯನ್ನು ಆರಂಭಿಸಲಾಗುತ್ತದೆ.

ಈ ತರಬೇತಿ ಸೌಲಭ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ ಹಾಗೂ ಇತರ ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗೆ ಎಂದು ಮುಖ್ಯಮಂತ್ರಿ ಬಜೆಟ್ ನಲ್ಲಿ ಹೇಳಿದ್ದರೂ ಕೂಡ ಇದು ಸರ್ಕಾರಿ ಕಾಲೇಜುಗಳಲ್ಲಿ ಅಧ್ಯಯನ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ದೊರಕಲಿದೆ ಎಂದು ಪಿಯುಸಿ ಇಲಾಖೆ ಅಧಿಕಾರಿಗಳು ಹೇಳುತ್ತಾರೆ.

ಮುಂದಿನ ವರ್ಷದ ಸಿಇಟಿ, ನೀಟ್ ಮತ್ತು ಜೆಇಇ ಪರೀಕ್ಷೆ ತೆಗೆದುಕೊಳ್ಳುವ ಪಿಯುಸಿ ವಿದ್ಯಾರ್ಥಿಗಳಿಗೆ ವಾರದಲ್ಲಿ ನಾಲ್ಕು ದಿನ ತರಬೇತಿ ನೀಡಲಾಗುತ್ತದೆ. ಸಾಮಾನ್ಯವಾಗಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಲ್ಲಿ ತೇರ್ಗಡೆ ಹೊಂದುವವರ ಸಂಖ್ಯೆ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳೇ ಹೆಚ್ಚಾಗಿರುತ್ತಾರೆ. ಇದಕ್ಕೆ ಸೂಕ್ತ ತರಬೇತಿ ಕೊರತೆಯೂ ಕಾರಣವಾಗಿರುತ್ತದೆ ಎಂದು ಅಧಿಕಾರಿಗಳು ಹೇಳುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com