ಮೈಸೂರು-ಕುಶಾಲನಗರ ರೈಲ್ವೆ ಯೋಜನೆಗೆ ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್

ಉದ್ದೇಶಿತ ಮೈಸೂರು-ಕುಶಾಲನಗರ ರೈಲ್ವೆ ಮಾರ್ಗವನ್ನು ವಿರೋಧಿಸಿ ಕೊಡಗು ವನ್ಯಜೀವಿ ಸೊಸೈಟಿ ...
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ಉದ್ದೇಶಿತ ಮೈಸೂರು-ಕುಶಾಲನಗರ ರೈಲ್ವೆ ಮಾರ್ಗವನ್ನು ವಿರೋಧಿಸಿ ಕೊಡಗು ವನ್ಯಜೀವಿ ಸೊಸೈಟಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.

ಕೊಡಗು ವನ್ಯಜೀವಿ ಸೊಸೈಟಿ ಅಧ್ಯಕ್ಷ ಕರ್ನಲ್ ಸಿ ಪಿ ಮುತ್ತಣ್ಣ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ವಿಭಾಗೀಯ ಪೀಠ ಸರ್ಕಾರಿ ಪರ ವಕೀಲರಿಂದ ಪ್ರತಿಕ್ರಿಯೆ ಕೇಳಿ ವಿಚಾರಣೆಯನ್ನು ಜುಲೈ 27ಕ್ಕೆ ಮುಂದೂಡಿದೆ.

ಉದ್ದೇಶಿತ ಮೈಸೂರು-ಕುಶಾಲನಗರ ರೈಲ್ವೆ ಮಾರ್ಗ ತಲಶ್ಶೇರಿ-ಮೈಸೂರು ರೈಲ್ವೆ ಮಾರ್ಗ ಯೋಜನೆಗೆ ಅಂತರ ಸಂಪರ್ಕ ಹೊಂದಿದ್ದು ಕರ್ನಾಟಕ ಮತ್ತು ಕೇರಳ ಮಧ್ಯೆ ಸಂಪರ್ಕ ಕಲ್ಪಿಸುವುದಾಗಿದೆ. ಇದರಿಂದ ಕೊಡಗು ಜಿಲ್ಲೆಯ ಸಂಪದ್ಭರಿತ ಪ್ರಾಕೃತಿಕ ಸಂಪತ್ತಿಗೆ ಧಕ್ಕೆಯುಂಟಾಗುತ್ತದೆ ಮತ್ತು ವನ್ಯಜೀವಿಗಳ ಬದುಕಿಗೆ ಕುತ್ತು ತರುತ್ತದೆ. ಇದರಿಂದ ಈ ರೈಲ್ವೆ ಮಾರ್ಗ ಯೋಜನೆಯನ್ನು ಕೈಬಿಡಬೇಕೆಂದು ಎಂಬುದು ಅರ್ಜಿದಾರರ ವಾದವಾಗಿದೆ.

ಎರಡು ರಾಜ್ಯಗಳನ್ನು ಸಂಪರ್ಕಿಸಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಬಹುದು ಎಂದು ಕೇಂದ್ರ ಸರ್ಕಾರ ನಿರ್ಮಿಸಲು ಹೊರಟಿರುವ ಈ ರೈಲ್ವೆ ಯೋಜನೆಗೆ ತಡೆ ನೀಡಬೇಕು. ಇಲ್ಲದಿದ್ದರೆ ಕೊಡಗು ಜಿಲ್ಲೆಯ ವನ್ಯಜೀವಿ ವೈವಿಧ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಇಡೀ ರೈಲ್ವೆ ಯೋಜನೆಯಲ್ಲಿ ಲಾಬಿ ನಡೆಯುತ್ತಿದ್ದು  ಕೇರಳದ ವಾಣಿಜ್ಯೋದ್ಯಮಿಗಳ ಹಿಡಿತದಲ್ಲಿದೆ. ಇವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ರೈಲ್ವೆ ಯೋಜನೆಗೆ ಹಸಿರು ನಿಶಾನೆ ತೋರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅರ್ಜಿಯಲ್ಲಿ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ, ಕರ್ನಾಟಕ ಮತ್ತು ಕೇರಳ ಸರ್ಕಾರವನ್ನು ಉಲ್ಲೇಖಿಸಿದ್ದಾರೆ.

ಅರಣ್ಯಭೂಮಿ ಒತ್ತುವರಿ; ರಾಜ್ಯದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್: ಮಡಿಕೇರಿ ನಗರದ ಕರ್ನಮ್ಗೇರಿ ಮೀಸಲು ಅರಣ್ಯವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವುದರ ಬಗ್ಗೆ ರಾಜ್ಯ ಸರ್ಕಾರದಿಂದ ಹೈಕೋರ್ಟ್ ಮಾಹಿತಿ ಕೇಳಿದೆ. ರವಿ ಚಂಗಪ್ಪ ಎಂಬುವವರು ಸಲ್ಲಿಸಿದ ದೂರಿಗೆ ಸಂಬಂಧಪಟ್ಟಂತೆ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಸಂಬಂಧಪಟ್ಟ ಅಧಿಕಾರಿಗಳಿಂದ ಸಲಹೆ ಪಡೆಯುವಂತೆ ಸರ್ಕಾರ ಪರ ವಕೀಲರಿಗೆ ಆದೇಶ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com