ಬೆಂಗಳೂರು: ಕ್ಲಾಸ್ ಮಾನಿಟರ್ ಮಾಡದಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಕ್ಲಾಸ್‌ ಮಾನಿಟರ್‌ ಮಾಡಲಿಲ್ಲ ಎನ್ನುವ ಕಾರಣಕ್ಕೆ ಮನನೊಂದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬೆಂಗಳೂರು: ಕ್ಲಾಸ್‌ ಮಾನಿಟರ್‌ ಮಾಡಲಿಲ್ಲ ಎನ್ನುವ ಕಾರಣಕ್ಕೆ ಮನನೊಂದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 
ಐಡಿಯಲ್‌ ಹೋಂ ಲೇಔಟ್‌ನ ಚಿತ್ರಾ ಅಪಾರ್ಟ್‌ಮೆಂಟ್‌ನಲ್ಲಿ ನೆಲೆಸಿರುವ ರಾಜೇಶ್‌ ಮತ್ತು ದಿವ್ಯಾ ದಂಪತಿಯ ಪುತ್ರ ದ್ರುವರಾಜ್‌ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ
ರಾಜರಾಜೇಶ್ವರಿನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವಿದ್ಯಾರ್ಥಿ ಖಾಸಗಿ ಶಾಲೆಯ 9ನೇ ತರಗತಿಯಲ್ಲಿ ಓದುತ್ತಿದ್ದ, ಈತ ಮಂಗಳವಾರ ರಾತ್ರಿ ಮಲಗುವ ಕೋಣೆಯ ಫ್ಯಾನಿಗೆ ನೇಣು ಹಾಕಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡದರು. 
ದ್ರುವರಾಜ್‌ ಪ್ರತಿಭಾವಂತ ವಿದ್ಯಾರ್ಥಿ ಆಗಿದ್ದ. ಹೀಗಾಗಿ ಮಾನಿಟರ್ ಆಗಲು ಬಯಸಿದ್ದ, ಆದರೆ ಅದು ಸಾಧ್ಯವಾಗದಿದ್ದಕ್ಕೆ ಕಳೆದ ಕೆಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದ, ಪ್ರಕರಣವನ್ನು ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com