ರೋಹಿಣಿ ಸಿಂಧೂರಿ ಸೇರಿ 20 ಐಎಎಸ್ ಅಧಿಕಾರಿಗಳ ವರ್ಗಾವಣೆ

ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಮುಗಿದ ಕೆಲವೇ ಕ್ಷಣಗಳಲ್ಲಿ ಆಡಳಿತಕ್ಕೆ ಭರ್ಜರಿ ಸರ್ಜರಿ ಮಾಡಲಾಗಿದ್ದು.....
ರೋಹಿಣಿ ಸಿಂಧೂರಿ
ರೋಹಿಣಿ ಸಿಂಧೂರಿ
Updated on: 
ಬೆಂಗಳೂರು: ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಮುಗಿದ ಕೆಲವೇ ಕ್ಷಣಗಳಲ್ಲಿ ಆಡಳಿತಕ್ಕೆ ಭರ್ಜರಿ ಸರ್ಜರಿ ಮಾಡಲಾಗಿದ್ದು, ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ 20 ಐಎಎಸ್​ ಅಧಿಕಾರಿಗಳನ್ನು ಶುಕ್ರವಾರ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವರ್ಗಾವಣೆ ಕಾರಣಕ್ಕೇ ರಾಜ್ಯಾದ್ಯಾಂತ ಭಾರಿ ಚರ್ಚೆಗೆ ಕಾರಣರಾಗಿದ್ದ ರೋಹಿಣಿ ಸಿಂಧೂರಿ ದಾಸರಿ ಅವರನ್ನು ಬೆಂಗಳೂರಿನ ವೃತ್ತಿ ಮತ್ತು ತರಬೇತಿ ವಿಭಾಗದ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಧಾನ ಕಾರ್ಯದರ್ಶಿಯಾಗಿದ್ದ ಎಲ್‌ ಕೆ ಅತೀಕ್‌ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ.
ಬಿಬಿಎಂಪಿ ಹೆಚ್ಚುವರಿ ಆಯುಕ್ತರಾಗಿ ಡಿ. ರಂದೀಪ್‌, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಜಾವೇದ್‌ ಅಖ್ತರ್‌, ಕೆಪಿಟಿಸಿಎಲ್‌ ಎಂಡಿಯಾಗಿಯೂ ಹೆಚ್ಚುವರಿ ಹೊಣೆ ನೀಡಲಾಗಿದೆ.
ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಡಾ. ನಾಗಲಾಂಬಿಕಾದೇವಿಗೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿಯಾಗಿ ಅಂಜುಂ ಪರ್ವೇಜ್‌, ಕರ್ನಾಟಕ ಮಿನರಲ್ಸ್ ಕಾರ್ಪೊರೇಷನ್‌ ಎಂಡಿಯಾಗಿ ನವೀನ್‌ ರಾಜ್‌ ಸಿಂಗ್‌ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com