ಬೆಳಗಾವಿ: ಬೆಳಗಾವಿಯಿಂದ ಉಡುಪಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ ಬಡೇಕೋಳ ಮಠದ ಬಳಿ ಶನಿವಾರ ಮುಂಜಾನೆ ಸಂಭವಿಸಿದೆ.
ಬೆಳಗಾವಿಯಿಂದ ಉಡುಪಿಗೆ ತೆರಳುತ್ತಿದ್ದ ಬಸ್ ಶನಿವಾರ ಬೆಳಗಿನ ಜಾವ ಪಲ್ಟಿಯಾಗಿದೆ. ಅಪಘಾತದಲ್ಲಿ ಕಿತ್ತೂರು ತಾಲೂಕಿನ ನಿಚ್ಚನಕಿ ಗ್ರಾಮದ ಅಶೋಕ ದುಂಡಿ ಮೃತಪಟ್ಟಿದ್ದಾರೆ. ಮತ್ತಿಬ್ಬರ ಗುರುತು ಪತ್ತೆಯಾಗಿಲ್ಲ.
ಗಾಯಗೊಂಡಿರುವ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಡುರಸ್ತೆಯಲ್ಲಿ ಬಸ್ ಪಲ್ಟಿಯಾದ ಕಾರಣ ಕೆಲಕಾಲ ಸಂಚಾರ ಅಸ್ತವ್ಯಸ್ಥಗೊಂಡಿತ್ತು. ಹಿರೆಬಾಗೇವಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.