ಡ್ರಗ್ ಮಾಫಿಯಾ ತಡೆಗೆ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರಿಗೆ ಡಾ. ಜಿ ಪರಮೇಶ್ವರ್ ಆದೇಶ

ಬೆಂಗಳೂರು: ಮಾದಕ ದ್ರವ್ಯ ಮಾಫಿಯಾ ತಡೆ ಕ್ರಮಗಳ ಪರಿಣಾಮಕಾರಿ ಜಾರಿಗೆ ಯೋಜನೆ ರೂಪಿಸುವಂತೆ ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವ ಡಾ ಜಿ ಪರಮೇಶ್ವರ್ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
ಮಾದಕದ್ರವ್ಯ ಪ್ರದಾರ್ಥ ಮತ್ತು ಸೈಕೋಟ್ರೋಪಿಕ್ ದ್ರವ್ಯ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ಕುರಿತು ಮಾಹಿತಿ ಪಡೆದ ಅವರು, ಮಾದಕವಸ್ತು ಪೂರೈಕೆದಾರರನ್ನು ಪತ್ತೆಹಚ್ಚಿ ಅವರು ವಿದೇಶಿಯರಾಗಿದ್ದರೂ ಕೂಡ ಕಠಿಣ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದರು.
ಈಗಿರುವ ಮಾದಕ ವಸ್ತು ವಿರೋಧಿ ದಳವನ್ನು ಬಲವರ್ಧಿಸುವಂತೆ ಕೂಡ ಉಪ ಮುಖ್ಯಮಂತ್ರಿ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಮಾದಕವಸ್ತು ಬಳಕೆಯನ್ನು ಮುಖ್ಯವಾಗಿ ಯುವಜನತೆ ಬಳಸುವುದರಿಂದ ವಿಮುಖ ಮಾಡುವಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು. ಮಾದಕದ್ರವ್ಯಗಳ ಬಳಕೆ ಶಾಲೆ, ಕಾಲೇಜುಗಳಲ್ಲಿ ಅಧಿಕವಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಪರಮೇಶ್ವರ್ ಹೇಳಿದ್ದಾರೆ ಎಂದು ಸಭೆಯ ನಂತರ ಅಧಿಕಾರಿಯೊಬ್ಬರು ಹೇಳಿದರು.
ಸಭೆಯಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್ ರಾಜು, ನಗರ ಪೊಲೀಸ್ ಆಯುಕ್ತ ಟಿ ಸುನಿಲ್ ಕುಮಾರ್ ಮತ್ತು ಹಿರಿಯ ಅಧಿಕಾರಿಗಳಿದ್ದರು. ಕಳೆದ ಶುಕ್ರವಾರ ಮುಕ್ತಾಯಗೊಂಡ ವಿಧಾನಮಂಡಲ ಕಲಾಪದಲ್ಲಿ ವಿಧಾನಸಭೆಯಲ್ಲಿ ರಾಜ್ಯದಲ್ಲಿನ ಡ್ರಗ್ ಮಾಫಿಯಾ ಬಗ್ಗೆ ಸದಸ್ಯರು ಗಂಭೀರ ಚರ್ಚೆ ನಡೆಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


