ಐಎಎಸ್ ಅಧಿಕಾರಿಗಳ ಮನೆಗೆ ಕನ್ನ ಹಾಕಿದ್ದ ಖದೀಮರ ಬಂಧನ

ಕೆಲ ತಿಂಗಳುಗಳ ಹಿಂದೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಪಿ.ಎನ್.ಶ್ರೀನಿವಾಸ್ ಆಚಾರಿ ಹಾಗೂ ಕಲಬುರಗಿ ಪ್ರಾದೇಶಿಕ ಆಯುಕ್ತ ಸುಬೋದ್ ಯಾದವ್ ಅವರ ಮನೆಗಳ ಬೀಗ ಮುರಿದು ಚಿನ್ನಾಭರಣಗಳನ್ನು ದೋಚಿದ್ದ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಬೆಂಗಳೂರು; ಕೆಲ ತಿಂಗಳುಗಳ ಹಿಂದೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಪಿ.ಎನ್.ಶ್ರೀನಿವಾಸ್ ಆಚಾರಿ ಹಾಗೂ ಕಲಬುರಗಿ ಪ್ರಾದೇಶಿಕ ಆಯುಕ್ತ ಸುಬೋದ್ ಯಾದವ್ ಅವರ ಮನೆಗಳ ಬೀಗ ಮುರಿದು ಚಿನ್ನಾಭರಣಗಳನ್ನು ದೋಚಿದ್ದ ಇಬ್ಬರು ಖದೀಮರನ್ನು ಸಂಜಯನಗರ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. 
ರಾಜಸ್ಥಾನ ಮೂಲಕ ಜಗದೀಶ್ (34) ಮತ್ತು ರತನ್ ರಾಜೇಂದ್ರ (30) ಬಂಧಿತ ಆರೋಪಿಗಳಾಗಿದ್ದಾರೆ. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮತ್ತಿಬ್ಬರಿಗಾಗಿ ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ. 
ಬಂಧಿತ ಆರೋಪಿಗಳಿಂದ 600 ಗ್ರಾಂ ಚಿನ್ನ ಮತ್ತು 2.5 ಕೆ.ಜಿ ಬೆಳ್ಳಿ ಸೇರಿದಂತೆ ರೂ.19 ಲಕ್ಷ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 
ಕಳ್ಳತನ ನಡೆದಿದ್ದ ಮನೆಗಳ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ಆರಂಭಿಸಿದ್ದ ಪೊಲೀಸರು, ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಅನುಮಾನದ ಮೇರೆಗೆ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆರೋಪಿಗಳು ಸತ್ಯ ಬಾಯ್ಬಿಟ್ಟಿದ್ದಾರೆಂದು ತಿಳಿದುಬಂದಿದೆ. 
2017ರ ಜುಲೈ 17ರಂದು ಪ್ರಾದೇಶಿಕ ಆಯುಕ್ತ ಸುಬೋದ್ ಯಾದವ್ ಅವರು ಅಮೆರಿಕ ಪ್ರವಾಸ ಕೈಗೊಳ್ಳುವ ಸಲುವಾಗಿ ವೀಸಾಗೆ ಅರ್ಜಿ ಸಲ್ಲಿಸಲು ಚೆನ್ನೈಗೆ ಕುಟುಂಬ ಸಮೇತ ತೆರಳಿದ್ದರು. ಆ ವೇಳೆ ಅವರ ಮನೆ ಬೀಗ ಮುರಿದು 1 ಕೆ.ಜಿ ಬೆಳ್ಳಿ 240 ಗ್ರಾಂ ಚಿನ್ನಾಭರಣಗಳನ್ನು ಆರೋಪಿಗಳು ದೋಚಿದ್ದರು. ಅದೇ ವರ್ಷ ಡಿಸೆಂಬರ್ 22 ರಂದು ತಮ್ಮ ಕುಟುಂಬ ಸಮೇತ ಮೈಸೂರಿಗೆ ತೆರಳಿದ್ದಾಗ ಚುನಾವಣಾ ಆಯುಕ್ತ ಶ್ರೀನಿವಾಸ್ ಆಚಾರಿ ಅವರ ಮನೆಗೆ ನುಗ್ಗಿ 100 ಗ್ರಾಂ ಚಿನ್ನ ಹಾಗೂ 2 ಕೆ.ಜಿ ಬೆಳ್ಳಿ ವಸ್ತುಗಳನ್ನು ದೋಚಿದ್ದರು. ಅಲ್ಲದೆ, ಒಟ್ಟು ಆರೋಪಿಗಳಿಂದ 8 ಮನೆಗಳ್ಳತನ ಪ್ರಕರಣಗಳು ಪತ್ತೆಯಾಗಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com