ಸುನ್ನಿ ಸಮುದಾಯ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟು ಹಂಚಿಕೆ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಸುನ್ನಿ ಮುಸ್ಲಿಂ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಮೊದಲ ವರ್ಷದ ಎಂಬಿಬಿಎಸ್ ಕೋರ್ಸ್ ಗಳಿಗೆ ...
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಸುನ್ನಿ ಮುಸ್ಲಿಂ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಮೊದಲ ವರ್ಷದ ಎಂಬಿಬಿಎಸ್ ಕೋರ್ಸ್ ಗಳಿಗೆ ಮಂಗಳೂರಿನ ಮೆಡಿಕಲ್ ಕಾಲೇಜಿನಲ್ಲಿ ಸೀಟು ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಆದೇಶ ನೀಡಲು ಕನಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್ ಮಾಡಿಕೊಂಡಿರುವ ಮನವಿ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ನ್ಯಾಯಮೂರ್ತಿಗಳಾದ ಎಎಸ್ ಬೊನ್ನಪ್ಪ ಮತ್ತು ಮೊಹಮ್ಮದ್ ನವಾಜ್ ಅವರನ್ನೊಳಗೊಂಡ ವಿಭಾಗೀಯ ಪೀಠ, ತೀರ್ಪನ್ನು ಕಾಯ್ದಿರಿಸಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಕಳೆದ 4ರಂದು ಹೊರಡಿಸಿದ್ದ ಆದೇಶದ ವಿರುದ್ಧ ಕನಚೂರು ಇಸ್ಲಾಮಿಕ್ ಎಜುಕೇಷನ್ ಟ್ರಸ್ಟ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.

ಕಳೆದ ಮೇಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದ ಟ್ರಸ್ಟ್ ಸಾಂಸ್ಥಿಕ ಕೋಟಾ ಸೀಟುಗಳಲ್ಲಿ 150 ಸ್ಥಾನಗಳಲ್ಲಿ ಸುನ್ನಿ ಸಮುದಾಯದ ವಿದ್ಯಾರ್ಥಿಗಳಿಗೆ ಮೊದಲ ವರ್ಷದ ಎಂಬಿಬಿಎಸ್ ತರಗತಿಗಳಿಗೆ 82 ಸೀಟುಗಳನ್ನು ನೀಡಬೇಕೆಂದು ಮನವಿ ಸಲ್ಲಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com