ಮೂಲಗಳ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಮುಂಡಡ್ಕ ನಿವಾಸಿ ಮೋಹನ್ ನಾಯಕ್(30 ವರ್ಷ) ಎಂಬಾತನನ್ನು ತನಿಖಾ ತಂಡ(ಎಸ್‌ಐಟಿ) ಬಂಧಿಸಿದೆ ಎಂದು ತಿಳಿದುಬಂದಿದೆ. ಎರಡು ದಿನಗಳ ಹಿಂದೆಯೇ ಅಧಿಕಾರಿಗಳು ಈತನನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಮೋಹನ್ ನಾಯಕ್‌ನನ್ನು ಜುಲೈ 19ರಂದು ಮುಂಜಾನೆ 2 ಗಂಟೆ ಸುಮಾರಿಗೆ ಬೆಂಗಳೂರಿನಿಂದ ಬಂದ ಎಸ್ಐಟಿ. ಪೊಲೀಸರು ಸಂಪಾಜೆಯ ಮುಂಡಡ್ಕದಿಂದ ಬಂಧಿಸಿ ಕರೆದೊಯ್ದಿದ್ದರು. ಬಂಧಿತನನ್ನು ಗುರುವಾರ ಸಂಜೆ ಬೆಂಗಳೂರು 3ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ಕಾಲ ಎಸ್‌ಐಟಿ ವಶಕ್ಕೆ ನೀಡಿದೆ ಎಂದು ಎಸ್‌ಐಟಿ ತನಿಖಾಧಿಕಾರಿ ಎಂ.ಎನ್.ಅನುಚೇತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.