ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಕುಮಾರಸ್ವಾಮಿ ಮತ್ತು ಇತರರು
ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಕುಮಾರಸ್ವಾಮಿ ಮತ್ತು ಇತರರು

ಉತ್ತಮ ಮಳೆಯಾಗುತ್ತಿದೆ, ರೈತರೇ.. ಆತ್ಮಹತ್ಯೆ ಮಾಡಿಕೊಳ್ಳಬೇಡಿ: ಸಿಎಂ ಮನವಿ

ಮಳೆ ಬಂದರೆ ಸರ್ಕಾರಕ್ಕೆ ಅನುಕೂಲವಾಗುತ್ತದೆಯೇ ಎಂಬ ಪ್ರಶ್ನೆಗೆ ಮುಖ್ಯಮಂತ್ರಿ ಹೆಚ್ ಡಿ ...

ಮೈಸೂರು: ಮಳೆ ಬಂದರೆ ಸರ್ಕಾರಕ್ಕೆ ಅನುಕೂಲವಾಗುತ್ತದೆಯೇ ಎಂಬ ಪ್ರಶ್ನೆಗೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೌದು ಎನ್ನುತ್ತಾರೆ.

ಅವರು ನಿನ್ನೆ ಕೆಆರ್ ಎಸ್, ಕಬಿನಿ ಜಲಾಶಯಗಳಿಗೆ ಬಾಗಿನ ಅರ್ಪಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕೃತಿ ಈ ವರ್ಷ ರಾಜ್ಯ ಸಮ್ಮಿಶ್ರ ಸರ್ಕಾರದ ಪರವಾಗಿದ್ದು, ಕಾವೇರಿ ಜಲಾನಯದ ನಾಲ್ಕು ಜಲಾಶಯಗಳು ಸೇರಿದಂತೆ ರಾಜ್ಯದ ಬಹುತೇಕ ಜಲಾಶಯಗಳು ಉತ್ತಮ ಮಳೆಯಿಂದಾಗಿ ಭರ್ತಿಯಾಗಿವೆ. ಇದಕ್ಕೆ ತಾಯಿ ಚಾಮುಂಡೇಶ್ವರಿ ಅವರ ಆಶೀರ್ವಾದವೇ ಕಾರಣ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಉತ್ತಮ ಮಳೆಯಿಂದಾಗಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವಿನ ಸಂಬಂಧ ಉತ್ತಮವಾಗಬಹುದು ಎಂಬ ಆಶಾವಾದದಲ್ಲಿ ಅವರಿದ್ದಾರೆ.

ಮಂಡ್ಯ ಜಿಲ್ಲೆಯ ಕೆಆರ್ ಎಸ್ ಜಲಾಶಯಕ್ಕೆ ನೀರಿನ ಒಳಹರಿವು 50 ಸಾವಿರ ಕ್ಯೂಸೆಕ್ಸ್ ಗಿಂತ ಅಧಿಕವಾಗಿದ್ದು ಕೆಆರ್ ಎಸ್ ಮತ್ತು ಕಬಿನಿ ಜಲಾಶಯದ ಹೊರಹರಿವಿನಿಂದ ಜುಲೈ 31ರೊಳಗೆ ತಮಿಳುನಾಡಿಗೆ ಹರಿಸಬೇಕಾಗಿರುವ 131 ಟಿಎಂಸಿ ನೀರನ್ನು ಬಿಡುಗಡೆ ಮಾಡಲು ಸಾಧ್ಯವಾಗಬಹುದು. ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಕರ್ನಾಟಕ ಮತ್ತು ತಮಿಳುನಾಡು ಮಧ್ಯೆ ಯಾವುದೇ ರಾಜಕೀಯ ಒತ್ತಡಗಳು ಇರಲಾರದು. ರೈತರು ಕೂಡ ಆತ್ಮಹತ್ಯೆಯಂತಹ ಕಠಿಣ ನಿರ್ಧಾರವನ್ನು ತೆಗೆದುಕೊಳ್ಳಬಾರದು ಎಂದು ಮನವಿ ಮಾಡಿಕೊಂಡರು.

ಹಿಂದಿನ ಸಿದ್ದರಾಮಯ್ಯ ಸರ್ಕಾರ ಸರ್ಕಾರಿ ಉದ್ಯೋಗಿಗಳ ವೇತನವನ್ನು ಶೇಕಡಾ 30ರಷ್ಟು ಹೆಚ್ಚಳ ಮಾಡಿರುವುದರಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗಿದ್ದು ರೈತರ ಸಾಲಮನ್ನಾ ಅಷ್ಟು ಸುಲಭವಲ್ಲ ಎಂಬ ಮಾತನ್ನು ಮುಖ್ಯಮಂತ್ರಿ ಒಪ್ಪಿಕೊಂಡಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com