ಸಮ್ಮಿಶ್ರ ಸರ್ಕಾರ ರಾಜ್ಯವನ್ನು ಹಣಕಾಸು ಬಿಕ್ಕಟ್ಟಿಗೆ ತಳ್ಳುತ್ತಿದೆ: ಬಿಎಸ್ ವೈ ಆರೋಪ

ಕರ್ನಾಟಕದ ಅಭಿವೃದ್ಧಿಗೆ ಸಮ್ಮಿಶ್ರ ಸರ್ಕಾರ ಏನೂ ಮಾಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ...
ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ
ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ: ಕರ್ನಾಟಕದ ಅಭಿವೃದ್ಧಿಗೆ ಸಮ್ಮಿಶ್ರ ಸರ್ಕಾರ ಏನೂ ಮಾಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ.

ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮತ್ತು ಈಗಿನ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ 40 ಸಾವಿರ ಕೋಟಿ ರೂಪಾಯಿಗೂ ಅಧಿಕ ಅನಪೇಕ್ಷಿತ ಸಾಲ ಮಾಡುವ ಮೂಲಕ ರಾಜ್ಯದ ಜನತೆಯ ಮೇಲೆ ಹೊರಹಾಕಿದೆ ಎಂದು ಆರೋಪಿಸಿದರು.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ರಾಜ್ಯದ ಆರ್ಥಿಕತೆ ಹದಗೆಡುತ್ತಿದೆ. ಸುಮಾರು 500 ಕೋಟಿ ರೂಪಾಯಿಗಳೊಂದಿಗೆ ನಮ್ಮ ಸರ್ಕಾರ ಶಿವಮೊಗ್ಗ ಸುತ್ತಮುತ್ತ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿತ್ತು. ನಗರಕ್ಕೆ ಹಲವು ಡಬಲ್ ರಸ್ತೆಗಳು ಸಿಗುವಂತೆ ನಾವು ಮಾಡಿದ್ದೆವು. ನಗರ ರೈಲ್ವೆ ನಿಲ್ದಾಣವನ್ನು ಕೆಇಬಿ ಸರ್ಕಲ್ ಜೊತೆ ಸಂಪರ್ಕಿಸಿದ್ದೇವೆ. ಅಲ್ಲದೆ 82 ಕಿಲೋ ಮೀಟರ್ ಉದ್ದದ ರೈಲ್ವೆ ಹಳಿಯನ್ನು ತಲಗಪ್ಪ ಮತ್ತು ಹೊನ್ನಾವರ ಮಧ್ಯೆ ನಿರ್ಮಿಸಲಾಗಿದೆ. ಈ ಅಭಿವೃದ್ಧಿ ಕೆಲಸಗಳಿಗೆ ವಿರುದ್ಧವಾಗಿ ಸಿದ್ದರಾಮಯ್ಯ ಸರ್ಕಾರ ಕಳೆದ ಐದು ವರ್ಷಗಳಲ್ಲಿ ಸುಮಾರು 2,86,479 ಕೋಟಿ ರೂಪಾಯಿ ಸಾಲ ಪಡೆದುಕೊಂಡಿತ್ತು. ಇದೀಗ ಸಮ್ಮಿಶ್ರ ಸರ್ಕಾರದಲ್ಲಿ ಅದು 2,92,000 ಕೋಟಿ ರೂಪಾಯಿಗೆ ಏರಿಕೆಯಾಗಿದೆ ಎಂದು ಆರೋಪಿಸಿದರು.

ಹಲವು ಸಹಕಾರಿ ಬ್ಯಾಂಕುಗಳು ರಾಜ್ಯ ಸರ್ಕಾರದ ಅಧೀನದಲ್ಲಿದ್ದರೂ ಕೂಡ ಸಮ್ಮಿಶ್ರ ಸರ್ಕಾರ ನಾಲ್ಕು ಹಂತಗಳಲ್ಲಿ ರಾಜ್ಯದ ರೈತರ ಸಾಲಮನ್ನಾ ಮಾಡಲು ರಾಷ್ಟ್ರೀಕೃತ ಬ್ಯಾಂಕುಗಳ ಸಹಾಯ ಪಡೆದಿದೆ. ಇದಕ್ಕೆ ರಿಸರ್ವ್ ಬ್ಯಾಂಕು ಹೇಗೆ ಅವಕಾಶ ನೀಡುತ್ತದೆ ಎಂಬುದೇ ನನಗೆ ಅರ್ಥವಾಗುತ್ತಿಲ್ಲ. ರಾಷ್ಟ್ರೀಕೃತ ಬ್ಯಾಂಕಿನ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಎರಡು ಬಾರಿ ಸಭೆ ನಡೆಸಿದ್ದಾರೆ, ಆದರೆ ಈ ಎರಡೂ ಸಭೆಗಳಲ್ಲಿ ರಿಸರ್ವ್ ಬ್ಯಾಂಕಿನ ಅಧಿಕಾರಿಗಳು ಭಾಗವಹಿಸಿಲ್ಲ. ರೈತರ ಸಾಲಮನ್ನಾ ವಿಚಾರದಲ್ಲಿ ಸರ್ಕಾರ ನಿಯಮಬಾಹಿರವಾಗಿ ನಡೆದುಕೊಳ್ಳುತ್ತಿದೆ ಎಂದು ಬಿಎಸ್ ವೈ ಆಕ್ರೋಶ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com