ಖ್ಯಾತ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಉಡುಪಿ ಸರ್ಕಾರಿ ಶಾಲಾ ಶಿಕ್ಷಕನಿಗೆ ಸಲಾಂ ಅಂದಿದ್ದು ಯಾಕೆ ಗೊತ್ತ!

ಉಡುಪಿ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರ ಕೆಲಸಕ್ಕೆ ಫಿದಾ ಆಗಿರುವ ಭಾರತದ ಖ್ಯಾತ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅವರು ತಮ್ಮ ಟ್ವೀಟರ್ ನಲ್ಲಿ ಶಿಕ್ಷಕರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಹೈದರಾಬಾದ್: ಉಡುಪಿ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರ ಕೆಲಸಕ್ಕೆ ಫಿದಾ ಆಗಿರುವ ಭಾರತದ ಖ್ಯಾತ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅವರು ತಮ್ಮ ಟ್ವೀಟರ್ ನಲ್ಲಿ ಶಿಕ್ಷಕರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 
ಉಡುಪಿ ಜಿಲ್ಲೆಯ ಬಾರಾಳಿ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕರಾಗಿರುವ ರಾಜರಾಂ ಅವರು ವಿವಿಎಸ್ ಲಕ್ಷ್ಮಣ್ ಅವರು ಮೆಚ್ಚುಗೆಗೆ ಪಾತ್ರರಾದವರು. ಶಾಲೆಯಲ್ಲಿ ವಿಜ್ಞಾನ ಮತ್ತು ಗಣಿತ ಪಠ್ಯವನ್ನು ಬೋಧಿಸುವ ಇವರು ಶಾಲಾ ವಾಹನದ ಚಾಲಕನಾಗಿಯೂ ಕೆಲಸ ಮಾಡುತ್ತಿದ್ದಾರೆ. 
ರಾಜಾರಾಂ ಅವರು ಶಾಲೆಯಿಂದ ಸುಮಾರು ಆರು ಕಿ.ಮೀ ಆಸುಪಾಸಿನ ಮಕ್ಕಳನ್ನು ಪ್ರತಿನಿತ್ಯ ಕರೆತರುವ ಹಾಗೂ ವಾಪಸ್ ಮನೆಗಳಿಗೆ ಬಿಟ್ಟು ಬರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. ರಾಜಾರಾಂ ಅವರು ಈ ಕಾರ್ಯವನ್ನು ಮೆಚ್ಚಿ ವಿವಿಎಸ್ ಲಕ್ಷ್ಮಣ್ ಅವರು ತಮ್ಮ ಟ್ವೀಟರ್ ನಲ್ಲಿ ಇದನ್ನು ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com