ಜುಲೈ 26ಕ್ಕೆ ದ್ವಿತೀಯ ಪಿಯು ಪೂರಕ ಪರೀಕ್ಷೆ ಫಲಿತಾಶ ಪ್ರಕಟ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಜುಲೈ 26ರಂದು ಪ್ರಕಟವಾಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಜುಲೈ 26ರಂದು ಪ್ರಕಟವಾಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.
ಜುಲೈ 26ರ ಸಂಜೆ ಇಲಾಖೆಯ ವೆಬ್ ಸೈಟ್ ನಲ್ಲಿ ಫಲಿತಾಂಶಗಳು ದೊರಕಲಿದ್ದು ಮರುದಿನ ಕಾಲೇಜುಗಳಲ್ಲಿ ಪ್ರಕಟಿಸಲಾಗುತ್ತದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಸಿ. ಶಿಖಾ ತಿಳಿಸಿದ್ದಾರೆ
ಜೂ. 29 ರಿಂದ ಜು. 10 ರ ವರೆಗೆ ನಡೆದಿದ್ದ ಪೂರಕ ಪರೀಕ್ಷೆಯಲ್ಲಿ ರಾಜ್ಯಾದ್ಯಂತೆ  2.24 ಲಕ್ಷ ವಿದ್ಯಾರ್ಥಿಗಳು ಭಾಗವಹಿಸಿದ್ದರು. 
ಇಲಾಖೆ ವೆಬ್ ತಾಣ  http://www.pue.kar.nic.in ನಲ್ಲಿ ಜುಲೈ 26ರಂದು ಸಂಜೆ ಫಲಿತಾಂಶವನ್ನು ಪ್ರಕಟಿಸುವುದಾಗಿ ಇಲಾಖೆ ಮಾಹಿತಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com