ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್

ರೈತರ ಆತ್ಮಹತ್ಯೆಗೆ ಸಾಲಮನ್ನಾ ಒಂದೇ ಕಾರಣವಲ್ಲ: ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ಕೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಕಾರಣಕ್ಕೆ ಸರ್ಕಾರ ಸಾಲಮನ್ನಾ ಮಾಡುತ್ತಿಲ್ಲ ಎಂದು ಜಲ ಸಂಪನ್ಮೂಲ ಹಾಗೂ ವೈದ್ಯಕೀಯ ಸಚಿವ...
Published on
ಬೆಂಗಳೂರು: ರಾಜ್ಯದಲ್ಲಿ ಕೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಕಾರಣಕ್ಕೆ ಸರ್ಕಾರ ಸಾಲಮನ್ನಾ ಮಾಡುತ್ತಿಲ್ಲ ಎಂದು ಜಲ ಸಂಪನ್ಮೂಲ ಹಾಗೂ ವೈದ್ಯಕೀಯ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಮಾಧ್ಯಮವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಲವು ರೈತರು ವೈಯಕ್ತಿಕ ಕಾರಣಗಳಿಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ, ಆದರೆ ಎಲ್ಲಾ ರೈತರ ಆತ್ಮಹತ್ಯೆ ಸಾಲಕ್ಕಾಗಿ ಎಂದು ವರದಿಯಾಗುತ್ತಿದೆ ಎಂದು ಹೇಳಿದ್ದಾರೆ. ಎಲ್ಲಾ ರೈತರು ಸಾಲಮನ್ನಾಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿ ಮಾಡುವುದು ಸರಿಯಲ್ಲ ಎಂದು ಅವರು ತಿಳಿಸಿದ್ದಾರೆ.
ರಾಜ್ಯದ ರೈತರ ಒತ್ತಡ ಕಡಿಮೆಯಾಗಲಿ ಎಂಬ ಕಾರಣಕ್ಕೆ ರೈತರ ಸಾಲಮನ್ನಾ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಮಂಗಳವಾರ ಸಿಎಂ ಕುಮಾರ ಸ್ವಾಮಿ ಬ್ಯಾಂಕರ್ ಗಳ ಜೊತೆ ಸಭೆ ನಡೆಸಿ ಸಾಲಮನ್ನಾ ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ತಿಳಿಸಿದ ಅವರು, ರೈತರು ಆತ್ಮಹತ್ಯೆಯಂತ ತೀವ್ರತರದ ನಿರ್ಧಾರ ಕೈಗೊಳ್ಳಬಾರದು ಎಂದು ಮನವಿ ಮಾಡಿದ್ದಾರೆ. ರೈತರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ,
''ಆಗಸ್ಟ್‌ ಒಳಗೆ ಮಹದಾಯಿ ನ್ಯಾಯಾಧಿಕರಣದ ತೀರ್ಪು ಬರಲಿದೆ. ಇದು ನ್ಯಾಯಬದ್ಧವಾಗಿರುವ ವಿಶ್ವಾಸವೂ ಇದೆ. ಗೋವಾದವರೂ ನೀರು ಬಳಸಿಕೊಳ್ಳಲಿ. ಸಮುದ್ರಕ್ಕೆ ಹರಿದು ಹೋಗುವ ನೀರನ್ನು ಬೇಕಾದರೂ ಅವರು ಉಪಯೋಗಿಸಿಕೊಳ್ಳಲಿ. ಉತ್ತರ ಕರ್ನಾಟಕಕ್ಕೆ ಕುಡಿಯುವ ನೀರು ಪೂರೈಸುವ ದೃಷ್ಟಿಯಿಂದ ನಾವು ಸಮರ್ಥ ಕಾನೂನು ಹೋರಾಟ ಮಾಡುತ್ತಿದ್ದೇವೆ. ನಮಗೆ ನ್ಯಾಯ ಸಿಗಲಿದೆ,'' ಎಂದರು..
ಗೋವಾ ಅಧಿಕಾರಿಗಳು ಬಂದು ಸ್ಥಳ ಪರಿಶೀಲನೆ ಮಾಡಿಕೊಂಡು ಹೋಗಲಿ. ಅದನ್ನು ತಪ್ಪು ಎನ್ನುವುದಿಲ್ಲ. ನಾನೂ ಕೂಡ ಇದೇ ಉದ್ದೇಶದಿಂದ ಪ್ರಯಾಣ ಬೆಳೆಸಿದ್ದೆ. ಆದರೆ, ಸ್ಥಳಕ್ಕೆ ಭೇಟಿ ನೀಡಿದರೆ ತಪ್ಪು ಸಂದೇಶ ಹೋಗುತ್ತದೆ ಎಂಬ ಕಾರಣದಿಂದ ಧಾರವಾಡಕ್ಕೆ ಹೋಗಿದ್ದವನು ವಾಪಸ್‌ ಬಂದಿದ್ದೇನೆ,'' ಎಂದು ಸಚಿವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com