ರಾಜ್ಯ ಸರ್ಕಾರಿ ಕಾಲೇಜುಗಳಲ್ಲಿ ಬಿ.ಎ ಕೋರ್ಸ್ ಗೆ ಕೌಶಲ್ಯಾಭಿವೃದ್ಧಿ ವಿಷಯ ಸೇರ್ಪಡೆ

ಪದವೀಧರರಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿರುವುದನ್ನು ಪರಿಗಣಿಸಿ ರಾಜ್ಯ ಉನ್ನತ ಶಿಕ್ಷಣ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಪದವೀಧರರಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿರುವುದನ್ನು ಪರಿಗಣಿಸಿ ರಾಜ್ಯ ಉನ್ನತ ಶಿಕ್ಷಣ ಇಲಾಖೆ ಬಿ.ಎ ಪದವಿ ಕೋರ್ಸ್ ನಲ್ಲಿ ಕೌಶಲ್ಯಾಭಿವೃದ್ಧಿ ವಿಷಯವನ್ನು ಸೇರಿಸಲು ನಿರ್ಧರಿಸಿದೆ.

ಇದು ಮುಂದಿನ ಶೈಕ್ಷಣಿಕ ವರ್ಷದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ ಜಾರಿಗೆ ಬರಲಿದೆ. ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯ ನಂತರ ಉನ್ನತ ಶಿಕ್ಷಣ ಸಚಿವ ಜಿ ಟಿ ದೇವೇಗೌಡ ಮಾಹಿತಿ ನೀಡಿ, ನಮಗೆ ಸಿಕ್ಕಿರುವ ಅಂಕಿಅಂಶ ಪ್ರಕಾರ ಲಕ್ಷಾಂತರ ಪದವೀಧರರು ನಿರುದ್ಯೋಗಿಗಳಾಗಿದ್ದಾರೆ ಎಂದರು.

ನಿರುದ್ಯೋಗಿಗಳ ಸಂಖ್ಯೆಯಲ್ಲಿ ಬಿ ಎ ಪದವಿ ಮಾಡಿದವರು ಹೆಚ್ಚು ಮಂದಿ. ಇದನ್ನು ಗಂಭೀರವಾಗಿ ತೆಗೆದುಕೊಂಡಿರುವ ಇಲಾಖೆ ಕೌಶಲ್ಯಾಭಿವೃದ್ಧಿ ಕೋರ್ಸ್ ಗಳನ್ನು ಈಗಿರುವ ಡಿಗ್ರಿ ಕೋರ್ಸ್ ಗಳ ಜೊತೆ ಸೇರಿಸಲು ನಿರ್ಧರಿಸಲಾಗಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಆದ್ಯತೆ ನೀಡಲಿದೆ ಎಂದು ಸಚಿವ ದೇವೇಗೌಡ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com