ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ: ಇಬ್ಬರ ಬಂಧನ

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದ್ದು, ಮುಸ್ಲಿಂ ಮಹಿಳೆಯೊಂದಿಗೆ ಮಾತನಾಡಿದ್ದಕ್ಕೆ ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಮಂಗಳೂರು: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದ್ದು, ಮುಸ್ಲಿಂ ಮಹಿಳೆಯೊಂದಿಗೆ ಮಾತನಾಡಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ.
ಹಲ್ಲೆಗೆ ಒಳಗಾದ ವ್ಯಕ್ತಿಯನ್ನು ಸುರೇಶ್ ಎಂದು ಗುರುತಿಸಲಾಗಿದ್ದು, ಸದಸ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ನಿನ್ನೆ ಬಸ್ ನಿಲ್ದಾಣದಲ್ಲಿ ಬುರ್ಖಾ ಧರಿಸಿದ್ದ ಮುಸ್ಲಿಂ ಮಹಿಳೆಯೊಂದಿಗೆ ಮಾತನಾಡುತ್ತಿದ್ದ ಸುರೇಶ್ ಮೇಲೆ ಎಂಟು ಜನರ ತಂಡವೊಂದು ಹಲ್ಲೆ ನಡೆಸಿದೆ ಅವರು ತಿಳಿಸಿದ್ದಾರೆ.
ಘಟನೆ ಬಳಿಕ ಬಂಟ್ವಾಳದ ಫರಂಗಿ ಪೇಟೆ ನಿವಾಸಿಯಾಗಿರುವ ಸುರೇಶ್ ಅವರು, ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೆ ಇತರೆ ಆರೋಪಿಗಳ ಬಂಧನಕ್ಕೂ ಪೊಲೀಸರು ಬಲೆ ಬೀಸಿದ್ದಾರೆ.
ಬಂಧಿತರನ್ನು ಬಂಟ್ವಾಳದ ಅಮ್ಮೆಮಾರ್ ಗ್ರಾಮದ ನಿವಾಸಿ ಮಹಮ್ಮದ್ ಅಶ್ರಫ್ (20) ಹಾಗು ಫರಂಗಿಪೇಟೆಯ ಉಮ್ಮರ್ ಫಾರೂಕ್ (25) ಎಂದು ಗುರುತಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com