ಉತ್ತರ ಕರ್ನಾಟಕ ಅಭಿವೃದ್ಧಿಗೆ ಬೀದಿಗಿಳಿದ ಮಠಾಧೀಶರು

ಬೆಳಗಾವಿಯ ಸುವರ್ಣ ಸೌಧದ ಎದುರು ಇಂದು ಸಾಮೂಹಿಕ ಪ್ರತಿಭಟನೆಗೆ ವೇದಿಕೆ ಸಜ್ಜಾಗಿದೆ. ಉತ್ತರ ...
ಉತ್ತರ ಕರ್ನಾಟಕ ಹೋರಾಟ ಸಮಿತಿ ರಚಿಸಿರುವ ಪ್ರತ್ಯೇಕ ಧ್ವಜ
ಉತ್ತರ ಕರ್ನಾಟಕ ಹೋರಾಟ ಸಮಿತಿ ರಚಿಸಿರುವ ಪ್ರತ್ಯೇಕ ಧ್ವಜ

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದ ಎದುರು ಇಂದು ಸಾಮೂಹಿಕ ಪ್ರತಿಭಟನೆಗೆ ವೇದಿಕೆ ಸಜ್ಜಾಗಿದೆ. ಉತ್ತರ ಕರ್ನಾಟಕದ ಹಲವು ಮಠಾಧೀಶರು ಮತ್ತು ನಾಯಕರು ರಾಜ್ಯ ಸರ್ಕಾರ ಈ ಭಾಗದ ಜಿಲ್ಲೆಗಳ ಅಭಿವೃದ್ಧಿಯನ್ನು ಕಡೆಗಣಿಸಿವೆ ಎಂದು ಪ್ರತಿಭಟನೆಗಿಳಿದಿದ್ದಾರೆ.

ಉತ್ತರ ಕರ್ನಾಟಕದ ವಿವಿಧ ಭಾಗಗಳ ನೂರಕ್ಕೂ ಹೆಚ್ಚು ಮಠಾಧೀಶರು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರೂ ಸಹ ಸ್ಥಳೀಯ ಸಂಘಟನೆಗಳು, ಹೈದರಾಬಾದ್ ಕರ್ನಾಟಕ ಭಾಗದ ನಾಯಕರು ಇನ್ನೂ ಬೆಂಬಲ ಸೂಚಿಸಿಲ್ಲ. ಆದರೂ ಬೆಳಗಾವಿ ಮತ್ತು ಧಾರವಾಡಗಳ ಹಲವು ಮಠಾಧೀಶರು ಪ್ರತಿಭಟನೆಯಲ್ಲಿ ತಮ್ಮ ಭಾಗವಹಿಸುವಿಕೆಯನ್ನು ಖಚಿತಪಡಿಸಿದ್ದು ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳುವವರೆಗೆ ಸರ್ಕಾರದ ಮೇಲೆ ಒತ್ತಡ ಹಾಕುತ್ತಿರುವುದಾಗಿ ಹೇಳಿದ್ದಾರೆ.

ನಮ್ಮ ಮುಖ್ಯ ಬೇಡಿಕೆ ಸರ್ಕಾರದ ಪ್ರಮುಖ ಕಚೇರಿಗಳನ್ನು ಬೆಂಗಳೂರಿನಿಂದ ಬೆಳಗಾವಿಯ ಸುವರ್ಣ ಸೌಧಕ್ಕೆ ವರ್ಗಾಯಿಸಿ ಅದನ್ನು ಒಂದು ಶಕ್ತಿಯುತ  ಕೇಂದ್ರವನ್ನಾಗಿ ಮಾಡಲು ಒತ್ತಾಯಿಸುವುದು ನಮ್ಮ ಮುಖ್ಯ ಬೇಡಿಕೆಯಾಗಿದೆ ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿಯ ಅಧ್ಯಕ್ಷ ಮತ್ತು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡದ್ ತಿಳಿಸಿದ್ದಾರೆ. ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಸರ್ಕಾರ ತನ್ನ ನಿಲುವು ಬದಲಾಯಿಸುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಅವರು ಹೇಳಿದರು.

ಶ್ರೀಗಳ ಧರಣಿಗೆ ನಮ್ಮ ಸಂಪೂರ್ಣ ಬೆಂಬಲವಿದ್ದು ಸರ್ಕಾರ ನಮ್ಮ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸುವವರೆಗೆ ನಮ್ಮ ಪ್ರತಿಭಟನೆ ನಿಲ್ಲುವುದಿಲ್ಲ ಎನ್ನುತ್ತಾರೆ ಉತ್ತರ ಕರ್ನಾಟಕ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ನಾಗೇಶ್ ಗೊಳಶೆಟ್ಟಿ.

ಮಠಾಧೀಶರ ಧರಣಿಯನ್ನು ಆಯೋಜಿಸಿರುವ ಉತ್ತರ ಕರ್ನಾಟಕ ವಿಕಾಸ ವೇದಿಕೆ, ಸರ್ಕಾರ ತಮ್ಮ ಬೇಡಿಕೆಯನ್ನು ಈಡೇರಿಸುವ ವಿಶ್ವಾಸವನ್ನು ಹೊಂದಿದೆ. ವರ್ಷಕ್ಕೆ ಒಂದು ಬಾರಿ 10 ದಿನ ವಿಧಾನಮಂಡಲ ಕಲಾಪಕ್ಕೆ ಮಾತ್ರ ಸೀಮಿತವಾಗಿರುವ ಸುವರ್ಣಸೌಧದವನ್ನು ಇನ್ನಷ್ಟು ಶಕ್ತಿಗೊಳಿಸಲು ಬಳಕೆ ಮಾಡಿಕೊಳ್ಳಬೇಕೆಂದು ಸರ್ಕಾರವನ್ನು ಒತ್ತಾಯಿಸಲಿದ್ದೇವೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com