ಸಿಇಟಿ ಫಲಿತಾಂಶ ಪ್ರಟಕವಾದರೂ ಬಗೆಹರಿಯದ ಎಂಜಿನಿಯರಿಂಗ್ ಶುಲ್ಕ ನಿಗದಿ ಸಮಸ್ಯೆ

ಬಹುನಿರೀಕ್ಷಿತ 2018ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ ರಾಜ್ಯ ಸರ್ಕಾರ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಬಹುನಿರೀಕ್ಷಿತ 2018ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ ರಾಜ್ಯ ಸರ್ಕಾರ ಎಂಜಿನಿಯರಿಂಗ್ ಕೋರ್ಸ್ ಗಳ ಶುಲ್ಕವನ್ನು ಇನ್ನೂ ನಿಗದಿಪಡಿಸಿಲ್ಲ. ಈ ವರ್ಷ ಶುಲ್ಕದಲ್ಲಿ ಶೇಕಡಾ 50ರಷ್ಟು ಹೆಚ್ಚಳ ಮಾಡುವಂತೆ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಒತ್ತಾಯಿಸುತ್ತಿವೆ. ಇಂತಹ ಪರಿಸ್ಥಿತಿ ವಿದ್ಯಾರ್ಥಿಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಶುಲ್ಕವನ್ನು ಹೆಚ್ಚಿಸಿದರೆ ನನ್ನಂಥ ಸೀಟು ಆಕಾಂಕ್ಷಿಗಳಿಗೆ ಉತ್ತಮ ಕಾಲೇಜಿನಲ್ಲಿ ಸೀಟು ಸಿಗುವುದು ಕಷ್ಟವಾಗಲಿದೆ. ನಾನು ಆರ್ಥಿಕವಾಗಿ ಹಿಂದುಳಿದ ಕುಟುಂಬದಿಂದ ಬಂದವನು. ಈ ಸಂದರ್ಭದಲ್ಲಿ ನನಗೆ ಏನೂ ನಿರ್ಧರಿಸಲು ಸಾಧ್ಯವಾಗುವುದಿಲ್ಲ ಎನ್ನುತ್ತಾರೆ ವಿದ್ಯಾರ್ಥಿಯೊಬ್ಬರು.

ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳೊಂದಿಗೆ ಎಂಜಿನಿಯರಿಂಗ್ ಕೋರ್ಸ್ ಗಳಿಗೆ ಸೀಟು ಹಂಚಿಕೆ ಮತ್ತು ಶುಲ್ಕ ನಿಗದಿ ಕುರಿತು ಅಂತಿಮ ನಿರ್ಧಾರಕ್ಕೆ ಬರಲು ಚುನಾವಣೆ ಮತ್ತು ಸರ್ಕಾರ ರಚನೆಯಿಂದಾಗಿ ವಿಳಂಬವಾಗಿದೆ. ಶುಲ್ಕ ನಿಗದಿ ಮತ್ತು ಸೀಟು ಹಂಚಿಕೆ ಕುರಿತು ಚರ್ಚೆ ನಡೆಸಲು ಉನ್ನತ ಶಿಕ್ಷಣ ಸಚಿವರ ಅಗತ್ಯವಿರುತ್ತದೆ. ಸಚಿವ ಸಂಪುಟ ಇನ್ನೂ ರಚನೆಯಾಗಬೇಕಾಗಿರುವುದರಿಂದ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಜೊತೆ ಸರ್ಕಾರದ ಪ್ರತಿನಿಧಿಗಳ ಮಟ್ಟದ ಮಾತುಕತೆ ಇನ್ನೂ ಆಗಿಲ್ಲ ಎಂದು ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳುತ್ತಾರೆ.

ಈ ಮಧ್ಯೆ ಖಾಸಗಿ ಎಂಜಿನಿಯರಿಂಗ್ ಕಾಲೇಜು ವ್ಯವಸ್ಥಾಪಕರು ಶೇಕಡಾ 50ರ ಶುಲ್ಕ ಹೆಚ್ಚಳ ವಿಚಾರದಲ್ಲಿ ಹೊಂದಾಣಿಕೆ ಮಾಡಿಕೊಳ್ಳಲು ತಯಾರಿಲ್ಲ. ಕಳೆದ ವರ್ಷ ಕೂಡ ಸರ್ಕಾರ ಶುಲ್ಕ ಹೆಚ್ಚಳ ಮಾಡಿಲ್ಲ. ಈಗಿರುವ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಿಲ್ಲ ಎನ್ನುತ್ತಾರೆ ಕರ್ನಾಟಕ ಅನುದಾನರಹಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಒಕ್ಕೂಟದ ಕಾರ್ಯದರ್ಶಿ ಎಂಕೆ ಪಾಂಡುರಂಗ ಶೆಟ್ಟಿ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com