ಬೆಂಗಳೂರಲ್ಲಿ ಅಮೆರಿಕಾ ರಾಯಭಾರ ಕಚೇರಿ ಆರಂಭಿಸಿ: ಮುಖ್ಯಮಂತ್ರಿ ಮನವಿ

ಬೆಂಗಳೂರಿನಲ್ಲಿ ಅಮೆರಿಕದ ರಾಯಭಾರ ಕಚೇರಿಯನ್ನು ಆರಂಭಿಸುವಂತೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅಮೆರಿಕದ ನಿಯೋಗಕ್ಕೆ ಮನವಿ ಮಾಡಿದ್ದಾರೆ.
ಸಿಎಂ ಕುಮಾರಸ್ವಾಮಿ ಅವರಿಂದ ಅಮೆರಿಕಾ ರಾಯಬಾರಿಗೆ ಸ್ವಾಗತ
ಸಿಎಂ ಕುಮಾರಸ್ವಾಮಿ ಅವರಿಂದ ಅಮೆರಿಕಾ ರಾಯಬಾರಿಗೆ ಸ್ವಾಗತ
ಬೆಂಗಳೂರು:  ಬೆಂಗಳೂರಿನಲ್ಲಿ  ಅಮೆರಿಕದ ರಾಯಭಾರ ಕಚೇರಿಯನ್ನು ಆರಂಭಿಸುವಂತೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅಮೆರಿಕದ ನಿಯೋಗಕ್ಕೆ ಮನವಿ ಮಾಡಿದ್ದಾರೆ. 
ಭಾರತದಲ್ಲಿನ ಅಮೆರಿಕದ ರಾಯಭಾರಿ ಕೆನ್ನೆತ್ ಜಸ್ಟರ್ ನೇತೃತ್ವದಲ್ಲಿ ಗುರುವಾರ ತಮ್ಮನ್ನು ಭೇಟಿಯಾದ ನಿಯೋಗದ ಜೊತೆ ಮಾತುಕತೆ ನಡೆಸಿದ ಮುಖ್ಯಮಂತ್ರಿ, ರಾಯಭಾರ ಕಚೇರಿ ಆರಂಭಿಸುವುದಾದರೆ ಅಗತ್ಯವಿರುವ ಜಾಗ, ಇತರ ಮೂಲಸೌಕರ್ಯ ಸೇರಿದಂತೆ ಎಲ್ಲ ನೆರವು ನೀಡಲು ಬದ್ಧ ಎಂದೂ ಭರವಸೆ ನೀಡಿದ್ದಾರೆ. 
ಮುಖ್ಯಮಂತ್ರಿಯ ಮನವಿಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಜಸ್ಟರ್, ಈ ಬಗ್ಗೆ ಉನ್ನತ ಹಂತದಲ್ಲಿ ಪ್ರಸ್ತಾಪಿಸುವುದಾಗಿ ತಿಳಿಸಿದರು.
ಅಮೆರಿಕದ ಸುಮಾರು 370 ಕಂಪನಿಗಳು ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಅವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಗಮನ ಹರಿಸಬೇಕು ಎಂದು ಜಸ್ಟರ್ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಪರಿಹಾರ ಒದಗಿಸುವಂತೆ ಜೊತೆಗಿದ್ದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ರಾಜ್ಯದ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ, ಬೆಂಗಳೂರಿನ ಮೆಟ್ರೊ ರೈಲು, ಎಕ್ಸ್‌ಪ್ರೆಸ್‌ ಹೆದ್ದಾರಿ, ಸೇರಿದಂತೆ ಅಭಿವೃದ್ಧಿ ಕ್ರಮ ಕುರಿತು ನಿಯೋಗಕ್ಕೆ ಮಾಹಿತಿ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com