

ನವದೆಹಲಿ: ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಸಮಾನ ರೀತಿಯಲ್ಲಿ ಖಾತೆ ಹಂಚಿಕೆಯಾಗಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಉಭಯ ಪಕ್ಷಗಳ ನಾಯಕರು ಪರಸ್ಪರ ಒಪ್ಪಿಗೆ ನೀಡಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೆಲ ಸಲಹೆ ನೀಡಿದ್ದಾರೆ. ಅದನ್ನು ಆ ಪಕ್ಷದ ನಾಯಕರು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.