ಆರೋಗ್ಯ ಸುರಕ್ಷಾ ಯೋಜನೆ-ಆರೋಗ್ಯ ಕರ್ನಾಟಕ ವಿಲೀನಕ್ಕೆ ಸರ್ಕಾರ ನಿರ್ಧಾರ

ಆರೋಗ್ಯ ಸುರಕ್ಷಾ ಯೋಜನೆ ಹಾಗೂ ಆರೋಗ್ಯ ಕರ್ನಾಟಕ ಯೋಜನೆಯನ್ನು ವಿಲೀನಗೊಳಿಸಲು ಆರೋಗ್ಯ ಇಲಾಖೆ ಶನಿವಾರ ನಿರ್ಧಾರ ಕೈಗೊಂಡಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು; ಆರೋಗ್ಯ ಸುರಕ್ಷಾ ಯೋಜನೆ ಹಾಗೂ ಆರೋಗ್ಯ ಕರ್ನಾಟಕ ಯೋಜನೆಯನ್ನು ವಿಲೀನಗೊಳಿಸಲು ಆರೋಗ್ಯ ಇಲಾಖೆ ಶನಿವಾರ ನಿರ್ಧಾರ ಕೈಗೊಂಡಿದೆ. 
ದೇಶದಲ್ಲಿ ಮೊದಲ ಬಾರಿಗೆ ಆರೋಗ್ಯಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳನ್ನು ಒಟ್ಟುಗೂಡಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ. ರಾಜೀವ್ ಆರೋಗ್ಯ ಭಾಗ್ಯ, ರಾಷ್ಟ್ರೀಯ ಸ್ವಾಸ್ಥ್ಯ, ಭೀಮಾ ಯೋಜನೆ ಸೇರಿದಂತೆ ಆರೋಗ್ಯಕ್ಕೆ ಸಂಬಂಧಿಸಿದ 11 ಯೋಜನೆಯನ್ನು ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಸೇರಿಸಲಾಗಿದೆ. 
ಕೇಂದ್ರವು ರೂ.10 ಕೋಟಿ ಕುಟುಂಬಗಳಿಗೆ ಆರೋಗ್ಯ ವಿಮೆ ಒದಗಿಸುವ ಯೋಜನೆಯನ್ನು ರಾಜ್ಯಗಳ ಸಹಭಾಗಿತ್ವದಲ್ಲಿ ಜಾರಿ ಮಾಡಲಾಗುತ್ತಿದೆ. ಈಗಾಗಲೇ ಚಾಲ್ತಿಯಲ್ಲಿರುವ ರಾಷ್ಟ್ರೀಯ ಸ್ವಾಸ್ಥ್ಯ ವಿಮಾ ಯೋಜನೆ ಆಗಸ್ಟ್ ಅಂತ್ಯವರೆಗೆ ಜಾರಿಯಲ್ಲಿರಲಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com