ಆರ್ಥಿಕ ಭದ್ರತೆ ಕಾಯ್ದುಕೊಳ್ಳಲು ಕ್ರಮ: ಹೊಸ ಕಾರು ಖರೀದಿಗೆ ಬ್ರೇಕ್, ಅನಗತ್ಯ ಸಿಬ್ಬಂದಿಗೆ ಗೇಟ್'ಪಾಸ್'ಗೆ ಸಿಎಂ ನಿರ್ಧಾರ

ರಾಜ್ಯ ಆಡಳಿತ ವ್ಯವಸ್ಥೆಯಲ್ಲಿ ಆಗುತ್ತಿರುವ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಲೂ ಹಾಗೂ ಆರ್ಥಿಕ ಭದ್ರತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿರುವ ಮುಖ್ಯಮಂತ್ರಿ...
ಹೆಚ್.ಡಿ.ಕುಮಾರಸ್ವಾಮಿ
ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು; ರಾಜ್ಯ ಆಡಳಿತ ವ್ಯವಸ್ಥೆಯಲ್ಲಿ ಆಗುತ್ತಿರುವ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಲೂ ಹಾಗೂ ಆರ್ಥಿಕ ಭದ್ರತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು, ಹೊಸ ಕಾರುಗಳ ಖರೀದಿಗೆ ಬ್ರೇಕ್ ಹಾಕಿದ್ದಾರೆಂದು ಭಾನುವಾರ ತಿಳಿದುಬಂದಿದೆ. 
ಈ ಕುರಿತಂತೆ ಮುಖ್ಯಮಂತ್ರಿ ಕಚೇರಿಯ ಮೂಲಗಳು ಮಾಹಿತಿ ನೀಡಿದ್ದು, ರಾಜ್ಯದ ಬೊಕ್ಕಸಕ್ಕೆ ಆಗುತ್ತಿರುವ ಆರ್ಥಿಕ ನಷ್ಟ ತಡೆಯಲು ಹಾಗೂ ಆರ್ಥಿಕ ಮಟ್ಟ ಉನ್ನತೀಕರಣ ಗೊಳಿಸುವ ಸಲುವಾಗಿ ಈ ರೀತಿಯ ಕ್ರಮ ಕೈಗೊಂಡಿದ್ದಾರೆಂದು ತಿಳಿಸಿದೆ. 
ಈಗಾಗಲೇ ಸರ್ಕಾರಿ ಇಲಾಖೆ, ಕಚೇರಿ ಹಾಗೂ ಸಂಸ್ಥೆಗಳು ಸಲ್ಲಿಸಿರುವ ಪ್ರಸ್ತಾವನೆಯನ್ನು ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದು, ಸರ್ಕಾರಿ ಕಚೇರಿಗಳು ಹಾಗೂ ಸರ್ಕಾರದ ಅಧಿಕೃತ ನಿವಾಸಗಳಿಗೆ ಅನಗತ್ಯವಾಗಿ ನವೀಕರಣ ಮಾಡುವ ಕಾರ್ಯಗಳನ್ನು ನಡೆದಂತೆ ತಿಳಿಸಿದ್ದಾರೆಂದು ತಿಳಿದುಬಂದಿದೆ. 
ಅಧಿಕಾರಿಗಳಿಗೆ ಸಿಎಂ ನೀಡಿರುವ ಸೂಚನೆಗಳು ಈ ಕೆಳಕಂಡಂತಿವೆ...
  • ಸಿಎಂ ಸೇರಿ ತುರ್ತು ಸಂದರ್ಭದಲ್ಲಿ ಮಾತ್ರ ವಿಶೇಷ ವಿಮಾನವನ್ನು ಬಳಕೆ ಮಾಡಬೇಕು. 
  • ಸಚಿವರು ಹಾಗೂ ನಿಗಮ ಮಂಡಳಿ ಅಧ್ಯಕ್ಷರಿಗೂ ಹೊಸ ಕಾರುಗಳನ್ನು ಖರೀದಿ ಮಾಡುವಂತಿಲ್ಲ,
  • ಅಧಿಕಾರಿಗಳ ಬೆಂಗಾವಲು ಪಡೆ ಕಡಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ
  • ಸರ್ಕಾರಿ ಇಲಾಖೆಯಲ್ಲಿರುವ ಅನಗತ್ಯ ಸಿಬ್ಬಂದಿಗೆ ಗೇಟ್'ಪಾಸ್ ನೀಡಲು ಸೂಚನೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com