ನೌಕರರ ಮುಷ್ಕರ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿಎಂಆರ್'ಸಿಎಲ್ ಅಧಿಕಾರಿಗಳು, ಈಗಾಗಲೇ ರಾಜ್ಯ ಗೃಹ ಕಾರ್ಯದರ್ಶಿ ಹಾಗೂ ಡಿಜಿ ಮತ್ತು ಪೊಲೀಸ್ ಆಯುಕ್ತರ ಬಳಿ ಮಾತುಕತೆ ನಡೆಸಲಾಗಿದ್ದು, ಪ್ರಯಾಣಿಕರ ಭದ್ರತೆಗೆ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ. ಪ್ರಯಾಣಿಕರಿಗೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ಬಿಎಂಟಿಸಿ ಕೂಡ ಕ್ರಮಗಳನ್ನು ಕೈಗೊಂಡಿದ್ದು, ಹೆಚ್ಚಿನ ಬಸ್ ಗಳ ವ್ಯವಸ್ಥೆಗಳನ್ನು ಮಾಡುತ್ತಿದೆ ಎಂದು ಹೇಳಿದ್ದಾರೆ.